spot_img
Wednesday, April 1, 2026
spot_img

ಲೋಕಸಭಾ ಚುನಾವಣೆ : ಪ್ರತಿ ಮತವೂ ಅಮೂಲ್ಯ, ಪ್ರತಿ ಧ್ವನಿಯೂ ಮುಖ್ಯ : ಪ್ರಧಾನಿ ಮೋದಿ

ಜನಪ್ರತಿನಿಧಿ (ನವ ದೆಹಲಿ) : ಲೋಕಸಭಾ ಚುನಾವಣೆಯ ಮೊದಲ ಹಂತ ಆರಂಭವಾಗಿದ್ದು, ದೇಶದ 102 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ದಾಖಲೆ ಪ್ರಮಾಣದ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಅವರು, ಯುವಕರು ಹಾಗೂ ಪ್ರಥಮ ಬಾರಿಗೆ ಮತದಾನ ಮಾಡುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಕರೆ ನೀಡಿದ್ದಾರೆ.

ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ ಇಂದಿನಿಂದ ಆರಂಭವಾಗಿದೆ. ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ವಿಶೇಷವಾಗಿ ಮೊದಲ ಬಾರಿಗೆ ಮತ ಚಲಾಯಿಸಲಿರುವ ನನ್ನ ಯುವ ಮಿತ್ರರಲ್ಲಿ ವಿಶೇಷ ಮನವಿ ಮಾಡುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ  ಪ್ರತಿ ಮತವೂ ಅಮೂಲ್ಯವಾಗಿದೆ ಹಾಗೂ ಪ್ರತಿ ಧ್ವನಿಯೂ ಮುಖ್ಯವಾಗಿದೆ ಎಂದು ವಿವಿಧ ಭಾಷೆಗಳಲ್ಲಿ ಮೋದಿ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

https://x.com/narendramodi/status/1781132011362725902

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!