spot_img
Monday, June 23, 2025
spot_img

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ : ಪೊಲೀಸ್‌ ಅಧಿಕಾರಿಗಳೊಂದಿಗೆ ಸಿಎಂ ಸುದೀರ್ಘ ಸಭೆ | ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ : ಸಿಎಂ

ಜನಪ್ರತಿನಿಧಿ (ಬೆಂಗಳೂರು) : ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್​ ಮೋಹನ್ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್​ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ಶುಕ್ರವಾರ) ಒಂದು ಗಂಟೆಗೂ ಅಧಿಕ ಕಾಲ ಸುದೀರ್ಘ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದರು. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ಪೊಲೀಸ್‌ ಅಧಿಕಾರಿಗಳೊಂದಿಗೆ ನಡೆಸಿದ ಸಭೆ ಮುಗಿದ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದಾರಾಮಯ್ಯ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಬಲವಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ ಎಂದು ಭರವಸೆ ನೀಡಿದ್ದಾರೆ.

ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಸಿ, ಕೊಲೆಯಾದ ನೇಹಾ ಹಾಗೂ ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ. ಘಟನೆ ನಡೆದ ಸಂದರ್ಭದಲ್ಲಿ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ. ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಎಂದು ಹೇಳಿದರು.

ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಎಂಬ ಹತಾಶೆ, ಕೋಪದಲ್ಲಿ ಕೊಲೆ ಮಾಡಿದ್ದಾನೆ. ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಸಿಎಂ ಸೂಚಿಸಿದ್ದಾರೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ. ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!