spot_img
Saturday, February 14, 2026
spot_img

ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾಗಿ ರವಿದಾಸ್ ಶೆಟ್ಟಿ ನೇಮಕ

ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ (ರಿ) ಶಂಕರನಾರಾಯಣ ಪ್ರವರ್ತಿತ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ ಶಿಕ್ಷಣ ಕ್ಷೇತ್ರದಲ್ಲಿ ಹತ್ತು ಹಲವು ಪ್ರಶಸ್ತಿಯೊಂದಿಗೆ ಸುದೀರ್ಘ 25 ವರ್ಷಗಳ ಸೇವಾನುಭವ ಹೊಂದಿರುವ ಉಪ್ಪುಂದದ ರವಿದಾಸ್ ಶೆಟ್ಟಿ MA, MEd. ನೂತನ ಮುಖ್ಯಶಿಕ್ಷಕರಾಗಿ ನೇಮಕಗೊಂಡಿದ್ದಾರೆ.

ರವಿದಾಸ ಶೆಟ್ಟಿ ಅವರು ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಕಾರವಾರ ಮತ್ತು ಉಡುಪಿ ಜಿಲ್ಲೆ, ಆದರ್ಶ ಶಿಕ್ಷಕ ಉಡುಪಿ ಜಿಲ್ಲೆ, ಸಾಧಕ ಪ್ರಶಸ್ತಿ ಜೆ. ಸಿ.ಐ ಉಪ್ಪುಂದ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಶುಭದಾ ಶಾಲೆಗಳು, ಹಾಗೂ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇರಳ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಆಯ್ಕೆಯಾದ ನೂತನ ಮುಖ್ಯಶಿಕ್ಷಕರಿಗೆ ಸಂಸ್ಥೆಯ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದ, ಪಾಲಕರು ಶುಭಕೋರಿದರು.

ಮುಖ್ಯಶಿಕ್ಷಕರಾಗಿ ಅಧಿಕಾರ ಸ್ವೀಕರಿಸಿದ ರವಿದಾಸ್ ಶೆಟ್ಟಿ ಸಂಸ್ಥೆಯ ಸರ್ವತೋಮುಖ ಏಳಿಗೆಗಾಗಿ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಸೇವೆಸಲ್ಲಿಸುವುದಾಗಿ ಸಂಸ್ಥೆಯ ಆಡಳಿತ ಮಂಡಳಿಗೆ ಭರವಸೆ ನೀಡಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!