spot_img
Wednesday, April 1, 2026
spot_img

200 ಬೂತ್ ತಲುಪಿದ ‘ಬೂತ್ ಕಡೆಗೆ ಸಮೃದ್ಧ ನಡಿಗೆ’ ಅಭಿಯಾನ, ಗಂಟಿಹೊಳೆ ಯಾತ್ರೆಗೆ ಭರಪೂರ ಜನಸ್ಪಂದನ

ಬೈಂದೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ಬೂತ್ ಕಡೆಗೆ ಸಮೃದ್ಧ ನಡಿಗೆ ಎನ್ನುವ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ಇಂದು ಅಭಿಯಾನದ ಮೂಲಕ ಬೈಂದೂರು ಕ್ಷೇತ್ರದ 200 ಬೂತ್ ಗಳನ್ನು ಕಾರ್ಯಕರ್ತರು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಪಟ್ಟಕ್ಕೆ ಏರಿಸುವ ಸಂಕಲ್ಪ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷ ಮತಗಳ ಲೀಡ್ ಒದಗಿಸುವ ಸಂಕಲ್ಪದೊಂದಿಗೆ ಬೂತ್ ಕಡೆಗೆ ಸಮೃದ್ಧ ನಡಿಗೆ ಅಭಿಯಾನ ಹಮ್ಮಿಕೊಂಡಿದ್ದು, ಅಭಿಯಾನ ಸಮಾರೋಪದತ್ತ ಯಶಸ್ವಿಯಾಗಿ ಸಾಗುತ್ತಿದೆ.

ನಿರಂತರ 18 ದಿನಗಳ ಕಾಲ ನಡೆಯಲಿರುವ ಈ ಅಭಿಯಾನದಲ್ಲಿ ಕಾರ್ಯಕರ್ತರೊಂದಿಗೆ ಶಾಸಕ ಗಂಟಿಹೊಳೆ ಅವರು ಕೂಡಾ ಹೆಜ್ಜೆ ಹಾಕುತ್ತಿರುವುದು ವಿಶೇಷ. ಅಭಿಯಾನದ ಹಾದಿಯಲ್ಲಿ ಕಾರ್ಯಕರ್ತರು ಮೋದಿ ಸರ್ಕಾರದ ಸಾಧನೆಗಳನ್ನು ಮತ್ತು ರಾಘವೇಂದ್ರ ಅವರು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ತಲುಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!