Wednesday, September 11, 2024

ದೇಶವನ್ನು ಮುಂದಿನ ಐದು ವರ್ಷಗಳಲ್ಲಿ ಬೃಹತ್‌ ಜಾಗತಿಕ ಶಕ್ತಿಯಾಗಿ ಪರಿವರ್ತಿಸುವ ಗುರಿ : ನಮೋ

ಜನಪ್ರತಿನಿಧಿ (ಮಧ್ಯ ಪ್ರದೇಶ) : ಮುಂದಿನ ಐದು ವರ್ಷಗಳಲ್ಲಿ ಭಾರತವನ್ನು ಬೃಹತ್‌ ಜಾಗತಿಕ ಶಕ್ತಿಯನ್ನಾಗಿ ಪರಿವರ್ತಿಸುವ ಗುರಿಯನ್ನು ಈ ಬಾರಿಯ ಲೋಕಸಭಾ ಚುನಾವಣೆ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಲ್ಲಿನ ದಾಮೋಹ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದಶಕಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ರಕ್ಷಣಾ ಕ್ಷೇತ್ರವನ್ನು ದುರ್ಬಲಗೊಳಿಸಿದೆ. ಆದರೇ, ಈಗ ಬಿಜೆಪಿ ಸರ್ಕಾರ ರಕ್ಷಣಾ ಕ್ಷೇತ್ರವನ್ನು ಬಲಪಡಿಸುತ್ತಿದೆ. ಫ್ರಾನ್ಸ್‌ ನಿರ್ಮಿತ ರಫೇಲ್‌ ಯುದ್ಧ ವಿಮಾನಗಳು ಭಾರತಕ್ಕೆ ಬರುವುದು ವಿರೋಧ ಪಕ್ಷಗಳಿಗೆ ಇಷ್ಟವಿರಲಿಲ್ಲ ಎಂದು ಮೋದಿ ಗಂಭೀರಿ ಆರೋಪ ಮಾಡಿದರು.

ನಮ್ಮ ಸರ್ಕಾರ ದೇಶದ ರಕ್ಷಣಾ ಪಡೆಗಳನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತಿದೆ. ಭಾರತವು ಅನೇಕ ದೇಶಗಳಿಗೆ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುತ್ತಿದೆ. ಭಯೋತ್ಪಾದನೆಯಲ್ಲಿ ತೊಡಗಿದ್ದ ದೇಶ ಪಾಕಿಸ್ತಾನ ಈಗ ಆಹಾರಕ್ಕಾಗಿ ಪರದಾಡುತ್ತಿದೆ ಎಂದೂ ಹೇಳಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕೆ ಬದ್ಧವಾಗಿದೆ. ದೇಶದ ಸುಮಾರು ಎಂಬತ್ತು ಕೋಟಿ ಫಲಾನುಭವಿಗಳಿಗೆ ಉಚಿತ ಪಡಿತರ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ. ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಲಿಷ್ಠ ಹಾಗೂ ಸ್ಥಿರ ಸರ್ಕಾರವನ್ನು ರಚಿಸುವ ಕಾರಣಕ್ಕೆ ಮತ ಹಾಕುವಂತೆ ಮನವಿ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!