Friday, November 8, 2024

ನರೇಂದ್ರ ಮೋದಿ ದೇಶದ ಶ್ರೀಮಂತರ ಸಾಲಮನ್ನಾ ಮಾಡಿದ್ದಾರೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಹಾಸನ) : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತಾರೆ. ಶ್ರೀಧರ್ ಗೌಡ ಮತ್ತು ಕೃಷ್ಣೇಗೌಡರು ಇಬ್ಬರೂ ಒಟ್ಟಾಗಿ ಸಮಾನ ಮನಸ್ಕರಾಗಿ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಇವರಿಬ್ಬರೂ ಒಟ್ಟಾಗಿ ಅರಕಲಗೋಡು ಕ್ಷೇತ್ರದಲ್ಲಿ 30 ಸಾವಿರಕ್ಕೂ ಅಧಿಕ ಮತಗಳ ಲೀಡ್ ಕೊಡಿಸುತ್ತಾರೆ ಎನ್ನುವ ಭರವಸೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹಾಸನ ಲೋಕಸಭಾ ಕ್ಷೇತ್ರದ ಅರಕಲಗೂಡಿನಲ್ಲಿ ನಡೆದ ಪ್ರಜಾಧ್ವನಿ-2 ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಧಾನಸಭಾ ಚುನಾವಣೆ ವೇಳೆ ರಾಹುಲ್‌ ಗಾಂಧಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ “ಬಿ” ಟೀಮ್ ಎಂದಿದ್ದರು. ಆಗ ದೇವೇಗೌಡರು ಈ ಮಾತನ್ನು ವಿರೋಧಿಸಿದ್ದರು. ಈಗ ಅದೇ ದೇವೇಗೌಡರು ಹೋಗಿ ನರೇಂದ್ರ ಮೋದಿ ಅವರ ಜೊತೆ ಸೇರಿದ್ದಾರೆ. ರಾಹುಲ್ ಗಾಂಧಿ ಅವರ ಮಾತನ್ನು ದೇವೇಗೌಡರು ಸಾಬೀತು ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಪರವಾಗಿ, ಹಾಸನದ ಪರವಾಗಿ ಪ್ರಜ್ವಲ್ ರೇವಣ್ಣ ಸಂಸತ್ತಿನಲ್ಲಿ ಬಾಯಿ ಬಿಡಲಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಹೀಗಾಗಿ ಈ ಬಾರಿ ಇವರನ್ನು ಸೋಲಿಸಿ ರಾಜ್ಯದ ಪರವಾಗಿ ಧ್ವನಿ ಎತ್ತುವ ಸಾಮರ್ಥ್ಯವಿರುವ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡುತ್ತೇನೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದ ರೈತರ ಸಾಲ ಮನ್ನಾ ಮಾಡಲಾಗುವುದು ಎಂದರು.

ನರೇಂದ್ರ ಮೋದಿ ಅವರು ದೇಶದ ಅತ್ಯಂತ ಶ್ರೀಮಂತರ ಸಾಲವನ್ನು ಮಾತ್ರ ಮನ್ನಾ ಮಾಡಿದರು. ಆದರೆ ಕಾಂಗ್ರೆಸ್ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ರೈತರ 76,000 ಕೋಟಿ ಸಾಲ ಮನ್ನಾ ಮಾಡಿದ್ದರು. ಈ ಬಾರಿ ಇದು ಮರುಕಳಿಸುತ್ತದೆ.  ಹಾಗೆಯೇ ಮಹಿಳೆಯರ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ ಹಾಕುವುದೂ ಸೇರಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಇವೆಲ್ಲವನ್ನೂ ಜಾರಿ ಮಾಡುತ್ತೇವೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!