spot_img
Thursday, April 2, 2026
spot_img

ಕಂಚುಗೋಡು ಶ್ರೀ ರಾಮ ದೇವಸ್ಥಾನದ ಸುವರ್ಣ ಮಹೋತ್ಸವದ ಸುವರ್ಣ ಸಂಭ್ರಮ: ಧಾರ್ಮಿಕ ಸಭೆ

ಕುಂದಾಪುರ: ಕಂಚುಗೋಡಿನಂತಹ ಗ್ರಾಮೀಣ ಪ್ರದೇಶದಲ್ಲಿ ಪ್ರಾರಂಭವಾದ ಶ್ರೀ ರಾಮಚಂದ್ರ ದೇವಸ್ಥಾನ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ಸ್ತುತ್ಯಾರ್ಹವಾದುದು. ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವವನ್ನು ನಡೆಸಿ, ತ್ರೇತಾಯುಗದ ಪ್ರಭು ಶ್ರೀ ರಾಮಚಂದ್ರನ ವೈಭವವನ್ನು ನೋಡುವ ಭಾಗ್ಯ ಎಲ್ಲರಿಗೂ ದೊರೆಯುವಂತೆ ಮಾಡಿದ್ದಲ್ಲದೆ, ಸುವರ್ಣ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಅತ್ಯಂತ ಶಿಸ್ತುಬದ್ಧವಾಗಿ ಅಚ್ಚುಕಟ್ಟಾಗಿ ನಿರ್ವಹಿಸಿದ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಎಲ್ಲಾ ಮೀನುಗಾರರು ಅಭಿನಂದನಾರ್ಹರು ಮುಂಬೈನ ಉದ್ಯಮಿ ಎನ್.ಟಿ ಪೂಜಾರಿ ಹೇಳಿದರು.

ಹೊಸಾಡು ಗ್ರಾಮದ ಕಂಚುಗೋಡು ಶ್ರೀ ರಾಮ ದೇವಸ್ಥಾನದ ಸುವರ್ಣ ಮಹೋತ್ಸವದ ಸುವರ್ಣ ಸಂಭ್ರಮ-ಸಂತಸ ಸಂಗಮ ಅಂಗವಾಗಿ ಶುಕ್ರವಾರ ಸಂಜೆ ಜರಗಿದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಲಿಗ್ರಾಮದ ಡಿವೈನ್ ಪಾರ್ಕ್ ಟ್ರಸ್ಟ್‌ನ ಅಧಿಕಾರಿ ಸುದೇಶ ರಾವ್ ಧಾರ್ಮಿಕ ಉಪನ್ಯಾಸ ನೀಡಿದರು. ಗಂಗೊಳ್ಳಿ ಶ್ರೀ ಮಹಾಂಕಾಳಿ ದೇವಸ್ಥಾನದ ಜೀಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಮಡಿಕಲ್ ಸುರೇಶ ಖಾರ್ವಿ, ಗಂಗೊಳ್ಳಿ ಶ್ರೀ ಮಹಾಂಕಾಳಿ ದೇವಸ್ಥಾನದ ಅಧ್ಯಕ್ಷ ಮಡಿ ಶಂಕರ ಖಾರ್ವಿ, ಕಂಚುಗೋಡು ಶ್ರೀ ರಾಮ ದೇವಸ್ಥಾನದ ಅಧ್ಯಕ್ಷ ನಾಗೇಶ ಖಾರ್ವಿ, ದೇವಸ್ಥಾನದ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಚೌಕಿ ಸಂತೋಷ ಖಾರ್ವಿ, ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಯಶೋಧಾ ನಾರಾಯಣ ಖಾರ್ವಿ ಉಪಸ್ಥಿತರಿದ್ದರು.

ರಾಘವೇಂದ್ರ ವಿ. ಖಾರ್ವಿ ಸ್ವಾಗತಿಸಿದರು. ಸುರೇಶ ಖಾರ್ವಿ ವಿ.ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಘವೇಂದ್ರ ಖಾರ್ವಿ ವಿ.ಕೆ. ಕಾರ್ಯಕ್ರಮ ನಿರ್ವಹಿಸಿದರು. ವಾಸುದೇವ ಖಾರ್ವಿ ಸಹಕರಿಸಿದರು. ಸುಖಪಾಲ ಖಾರ್ವಿ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!