spot_img
Thursday, December 5, 2024
spot_img

ನೇಹಾ ಕೊಲೆ ಪ್ರಕರಣ : ಒಬ್ಬರ ಸಾವನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರ್ದೈವ | ಕೊಲೆಗಾರನಿಗೆ ಉಗ್ರ ಶಿಕ್ಷೆಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ನೇಹಾ ಕೊಲೆ ಪ್ರಕರಣವನ್ನು ರಾಜಕೀಯಕ್ಕೆ ತಿರುಗಿಸುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಶನಿವಾರ) ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳ ವರದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇನೆ, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಇಲ್ಲವೆಂದಲ್ಲ. ನಮ್ಮ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದು ತಿಳಿಸಿದರು.

ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಕುರಿತು ಮಾತನಾಡಿ, ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು.

ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು, ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಬಿಜೆಪಿಯವರ ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದು ಹೇಳಿದರು.

ಕಾಂಗ್ರೆಸ್ ನ ಚೊಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂಬ ಬಿಜೆಪಿ ತಿರುಗೇಟು ಕುರಿತು ಪ್ರತಿಕ್ರಿಯಿಸಿ, ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ. ಇದನ್ನು ತಿಳಿಸಲು ನಾವು ಜಾಹೀರಾತು ನೀಡಿದ್ದೇವೆ. ದೇಶದ ಜನರಿಗೆ 15 ಲಕ್ಷ ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು , ಅಚ್ಚೇ ದಿನ್ ಬಂದಿದೆಯೇ? ಎಂದು ಪ್ರಶ್ನಿಸಿದರು.

ಮೋದಿ ಕೊಟ್ಟಿರುವ ಆಶ್ವಾಸನೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶದ ಜನರಿಗೆ ಖಾಲಿ ಚೊಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೊಕ್ಕಸ ಖಾಲಿಯಾಗಿಲ್ಲ. ಎಲ್ಲಾ ಗ್ಯಾರಂಟಿ ಗಳನ್ನು ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ ಎಂದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!