Wednesday, September 11, 2024

ಎ.22ಕ್ಕೆ ಬೈಂದೂರು ಕ್ಷೇತ್ರದಲ್ಲಿ ಮಹಿಳಾ ಸಮಾವೇಶ, ಎಸ್.ಟಿ. ಸಮಾವೇಶ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬೈಂದೂರು ಭಾಗಿ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರೂ ಆದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಏಪ್ರಿಲ್ 22ರಂದು ಸೋಮವಾರ ಬೈಂದೂರಿಗೆ ಆಗಮಿಸಿ ದಿನವಿಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿ.ವೈ.ರಾಘವೇಂದ್ರ ಅವರು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮೊದಲ ಬಾರಿಗೆ ಬೈಂದೂರಿಗೆ ಆಗಮಿಸುತ್ತಿದ್ದಾರೆ.

ಮಹಿಳಾ ಸಮಾವೇಶ:
ಎ.22ರ ಬೆಳಗ್ಗೆ 10.30ಕ್ಕೆ ಕಿರಿಮಂಜೇಶ್ವರ ಮೂಕಾಂಬಿಕಾ ಟಿಂಬರ್ ಮಿಲ್ ಸಮೀಪದಲ್ಲಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದಿಂದ ಹಮ್ಮಿಕೊಂಡಿರುವ ಮಹಿಳಾ ಸಮಾವೇಶದಲ್ಲಿ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ. ಶಾಸಕರಾದ ಗುರುರಾಜ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯೆ ಭಾರತೀ ಶೆಟ್ಟಿ, ನಟಿ ಶ್ರುತಿ, ಶಿವಮೊಗ್ಗ ಬಿಜೆಪಿ ಉಪಾಧ್ಯಕ್ಷೆ ಡಾ. ರಾಜನಂದಿನಿ ಕಾಗೋಡು, ಬಿ.ಎಸ್. ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮೊದಲಾದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ದೇವಸ್ಥಾನ ಭೇಟಿ:
ಅಲ್ಲಿಂದ ಮಧ್ಯಾಹ್ನ 12.30ಕ್ಕೆ ಹಳಗೆರಿಯ ಶ್ರೀ ಕಾಲಭೈರವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಸ್ಥಳೀಯ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತಕತೆ ನಡೆಸಲಿದ್ದಾರೆ. ಅಲ್ಲಿಂದ ಶಿರೂರು ಕಡೆಗೆ ಪಯಾಣ ಬೆಳೆಸಲಿದ್ದಾರೆ.
ಮಧ್ಯಾಹ್ನ 3ಕ್ಕೆ ಕಂಚಗೋಡು ಶ್ರೀ ರಾಮ ಮಂದಿರಕ್ಕೆ ಭೇಟಿ, ಮಧ್ಯಾಹ್ನ 3.30ಕ್ಕೆ ಹೆಮ್ಮಾಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ, ಸಂಜೆ 4ಕ್ಕೆ ಬಗ್ವಾಡಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4.30ಕ್ಕೆ ಅಂಪಾರುವಿನಲ್ಲಿ ನಡೆಯುವ ಶ್ರೀ ನಾಗಮಂಡಲೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಎಸ್.ಟಿ. ಸಮಾವೇಶ:
ಸಂಜೆ 6 ಗಂಟೆಗೆ ತಗ್ಗರ್ಸೆ ಗುಡ್ಡಿಯಂಗಡಿಯಲ್ಲಿ ಮಂಡಲ ಬಿಜೆಪಿ ಎಸ್.ಟಿ ಮೋರ್ಚಾದಿಂದ ನಡೆಯುವ ಎಸ್.ಟಿ. ಸಮಾವೇಶದಲ್ಲಿ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಲಿದ್ದಾರೆ.

ಅಂದು ಬಿ.ವೈ. ರಾಘವೇಂದ್ರ ಅವರೊಂದಿಗೆ ಶಾಸಕರಾದ ಗುರುರಾಜ ಗಂಟಿಹೊಳೆ, ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸೇರಿದಂತೆ ಮಂಡಲದ ಪದಾಧಿಕಾರಿಗಳು ಜತೆಗಿರಲಿದ್ದಾರೆ.

ಚುನಾವಣೆ ಕಾರ್ಯಕ್ಕೆ ವೇಗ ನೀಡಲು ಮತ್ತು ಬೈಂದೂರಿನಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ಕೊಡಿಸಲು ಶಾಸಕರಾದ ಗುರುರಾಜ ಗಂಟಿಹೊಳೆಯವರು ಈಗಾಗಲೇ ‘ಬೂತ್ ಕಡೆಗೆ-ಸಮೃದ್ಧಿ ನಡಿಗೆ’ ಕಾರ್ಯಕ್ರಮದ ಮೂಲಕ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ಮಾಡುತ್ತಿದ್ದಾರೆ. ನಿರಂತರ ಬೂತ್ ನಡಿಗೆಯ ಮೂಲಕ ಚುನಾವಣಾ ಕಾರ್ಯದಲ್ಲಿ ಕಾರ್ಯಕರ್ತರಿಗೆ, ಮುಖಂಡರಿಗೆ ಉತ್ಸಾಹ, ಹುಮ್ಮಸ್ಸು ತುಂಬುತ್ತಿದ್ದಾರೆ. ಈ ಮಧ್ಯೆ ಬಿ.ವೈ. ರಾಘವೇಂದ್ರ ಅವರು ಬೈಂದೂರಿಗೆ ಆಗಮಿಸುತ್ತಿರುವುದು ಮುಖಂಡರು, ನಾಯಕರು ಹಾಗೂ ಕಾರ್ಯಕರ್ತರಲ್ಲಿ ಚುನಾವಣ ಪ್ರಚಾರದ ಉತ್ಸಾಹ ಇನ್ನಷ್ಟು ಹೆಚ್ಚಲಿದೆ ಎಂದು ಮಂಡಲ ಬಿಜೆಪಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!