spot_img
Wednesday, April 1, 2026
spot_img

ಒಕ್ಕಲಿಗ ಸಮುದಾಯದ ನಾಯಕರಿಗೆ ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್ ಪಕ್ಷಗಳಿಂದ : ಹಿರಿಗೌಡರ ವಿರುದ್ಧ ಸಿಎಂ ವಾಗ್ದಾಳಿ

ಜನಪ್ರತಿನಿಧಿ (ಮಂಡ್ಯ) : ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಮ್ಮನಸ್ಸಿನಿಂದ, ಒಟ್ಟಿಗೇ ಕಾಂಗ್ರೆಸ್ ಗೆಲ್ಲಿಸಲು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬೀಳುವುದು ಖಚಿತ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ( ಸ್ಟಾರ್ ಚಂದ್ರು ) ಅವರ ಗೆಲುವು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್ ಪೇಟೆಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಂಪೇಗೌಡ ಜಯಂತಿ ಆರಂಭಿಸಿದ್ದು ನಾವು, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿದ್ದು ನಾವು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದ್ದು ನಾವು, ಹೆಚ್.‌ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮಾಡಿದ್ದೇನು? ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಾಪ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ? ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್ ನಿಂದಲೇ ಎಂದು ಜಾತಿ ಅಸ್ತ್ರ ಬಳಸಿ ಅವರು ಟೀಕಿಸಿದರು.

ಕೆ.ಆರ್.ಪೇಟೆ ಕೃಷ್ಣ ಅವರು ಅತ್ಯಂತ ಸಜ್ಜನರೂ, ಜನಪರ ಕಾಳಜಿ ಇದ್ದವರೂ ಆಗಿದ್ದರು. ಕೃಷ್ಣರವರನ್ನು ಮಂತ್ರಿ ಮಾಡಬೇಕು ಎನ್ನುವ ಇಚ್ಚೆ ನಮಗೆಲ್ಲರಿಗೂ ಇತ್ತು.‌ ಆದರೆ, ಮಂತ್ರಿ ಮಾಡಲು ದೇವೇಗೌಡರು ಒಪ್ಪಿರಲಿಲ್ಲ. ಆಗ ಸ್ಪೀಕರ್ ಆಗುವಂತೆ ಸಲಹೆ ನೀಡಿದ್ದೆ ಎಂಬ ವಿಚಾರವನ್ನೂ ಸಹ ಸಿಎಂ ಈ ಸಂದರ್ಭದಲ್ಲಿ ನೆನಪಿಸಿಕೊಂಡು ದೇವೇಗೌಡರ ವಿರುದ್ಧ ಆಕ್ರೋಶ ಹೊರ ಹಾಕಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!