Saturday, October 12, 2024

ಲೋಕಸಭಾ ಚುನಾವಣೆ : ಬಿಜೆಪಿಯ ಸಂಖ್ಯೆ 150 ದಾಟುವುದಿಲ್ಲ : ಕಾಂಗ್ರೆಸ್‌ ನಾಯಕ ರಾಗಾ ಭವಿಷ್ಯ

ಜನಪ್ರತಿನಿಧಿ (ಬಿಹಾರ) : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನ “ಬದಲಿಸಲು” ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಸಂವಿಧಾನ ಬದಲಿಸುವ ಯತ್ನವನ್ನು ಸಂಪೂರ್ಣವಾಗಿ ವಿಫಲಗೊಳಿಸುತ್ತದೆ ಎಂದು ಇಂದು(ಶನಿವಾರ) ಹೇಳಿದ್ದಾರೆ.

ಅವರು ಬಿಹಾರದ ಭಾಗಲ್ಪುರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು, ಲೋಕಸಭೆ ಚುನಾವಣೆಯಲ್ಲಿ 370 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಬಿಜೆಪಿಯ ಹೇಳಿಕೆಗೆ ವ್ಯಂಗ್ಯವಾಡಿದರು. “ಅವರ ಸಂಖ್ಯೆ 150 ದಾಟುವುದಿಲ್ಲ” ಎಂದು ಪ್ರತಿಪಾದಿಸಿದರು.

“ಈ ಬಿಜೆಪಿಯವರು 370ಕ್ಕೂ ಹೆಚ್ಚು ಕ್ಷೇತ್ರಗಳನ್ನು ಪಡೆದುಕೊಳ್ಳುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಆದರೆ 150 ಕ್ಕಿಂತ ಒಂದೇ ಒಂದು ಕ್ಷೇತ್ರ ಸಹ ಹೆಚ್ಚು ಪಡೆಯುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ” ಎಂದು ರಾಗ ಭವಿಷ್ಯ ನುಡಿದಿದ್ದಾರೆ.

“ಇಂಡಿಯಾ ಮೈತ್ರಿಕೂಟ ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಡುತ್ತಿದೆ ಮತ್ತು ಬಿಜೆಪಿ-ಆರ್‌ಎಸ್‌ಎಸ್ ಒಟ್ಟಾಗಿ ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿವೆ”. ‘ದೇಶದ ಬಡವರು, ದಲಿತರು ಮತ್ತು ಬುಡಕಟ್ಟು ಜನಾಂಗದವರಿಗೆ ಏನೆಲ್ಲ ಸಿಕ್ಕಿದೆಯೋ ಅದಕ್ಕೆ ಸಂವಿಧಾನವೇ ಕಾರಣ. ಸಂವಿಧಾನವನ್ನು ಬದಲಿಸಿದರೆ ಎಲ್ಲವೂ ಅಂತ್ಯವಾಗುತ್ತದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

https://x.com/INCIndia/status/1781584563539460273

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!