spot_img
Thursday, December 5, 2024
spot_img

ಬರ ಪರಿಹಾರ ಬಿಡುಗಡೆಗೊಳಿಸುವಲ್ಲಿ ಸುಪ್ರೀಂ ಮಧ್ಯಸ್ಥಿಕೆಗೆ ಸಿಎಂ ಧನ್ಯವಾದ

ಜನಪ್ರತಿನಿಧಿ (ಬೆಂಗಳೂರು) :  ಒಂದು ವಾರದೊಳಗೆ ರಾಜ್ಯದ ರೈತರಿಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಇಂದು(ಸೋಮವಾರ) ಒಪ್ಪಿಕೊಂಡಿದೆ.

ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲದ ಕಾರಣ ಸುಪ್ರೀಂಕೋರ್ಟ್​ಗೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ಮಾಡಿತ್ತು.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ನ್ಯಾಯ ಪೀಠಕ್ಕೆ ಪ್ರತಿಕ್ರಿಯಿಸಿ, ಏಪ್ರಿಲ್ 29ರೊಳಗೆ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡ‌ರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್​ 29ಕ್ಕೆ ಮುಂದೂಡಿತು.

ಈ ಬಗ್ಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ʼಎಕ್ಸ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬರ ಪರಿಹಾರ ವಿಳಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಸ್ಥಿಕೆಗೆ ಧನ್ಯವಾದ ಸಲ್ಲಿಸಿದ್ದಾರೆ.

2023ರ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ ಬರ ಪರಿಹಾರ ಹಣಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೊಂದು ಮೈಲಿಗಲ್ಲು ಆಗಿದೆ. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಸುಧೀರ್ಘ ಹೋರಾಟಕ್ಕೆ ಯಶಸ್ಸು ದೊರಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
https://x.com/siddaramaiah/status/1782316014711312707

https://x.com/krishnabgowda/status/1782325652537987557

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!