spot_img
Wednesday, January 22, 2025
spot_img

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೇ ದೇಶದ ಸಂಪತ್ತು ಮುಸ್ಲಿಮರಿಗೆ ಮರುಹಂಚಿಕೆ | ಮೋದಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಬಿಜೆಪಿ !

ಜನಪ್ರತಿನಿಧಿ  (ನವದೆಹಲಿ) : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಅವರು ಜನರ ಭಾವನೆಗಳನ್ನು ತಿಳಿಸಿದ್ದಾರೆ ಎಂದು ಇಂದು (ಸೋಮವಾರ) ಬಿಜೆಪಿ ಸಮರ್ಥಿಸಿಕೊಂಡಿದೆ.

ಇಂದು ವರದಿಗಾರರೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಹಿಂದಿನ ಕನ್ನಡಿ ತೋರಿಸಿದ್ದರಿಂದ ಪ್ರತಿಪಕ್ಷಗಳು ನೋವು ಅನುಭವಿಸುತ್ತಿವೆ ಎಂದು ವಾಗ್ದಾಳಿ ಮಾಡಿದರು.

ಪ್ರಧಾನಿ ಮೋದಿ ಅವರ ಹೇಳಿಕೆ ಜನರ ಪ್ರತಿಧ್ವನಿಯಾಗಿದೆ. ಏಕೆಂದರೆ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾಗೆ, ದೇಶವಾಸಿಗಳಿಗಿಂತ ಅಕ್ರಮವಾಗಿ ದೇಶ ಪ್ರವೇಶಿಸಿದ ಮುಸ್ಲಿಮರೇ ಹೆಚ್ಚು ಮುಖ್ಯ ಎಂದು ಭಾಟಿಯಾ ಆರೋಪ ಮಾಡಿದರು.

ನಿನ್ನೆ(ಆದಿತ್ಯವಾರ) ರಾಜಸ್ಥಾನದ ಬನ್ಸ್ವಾರಾದಲ್ಲಿ ಬಿಜೆಪಿ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಹಾಗೂ ಬೆಲೆಬಾಳುವ ವಸ್ತುಗಳನ್ನು “ನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಆರೋಪಿಸಿದ್ದರು.

2006ರಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅಲ್ಪಸಂಖ್ಯಾತರಿಗೆ, ವಿಶೇಷವಾಗಿ ಮುಸ್ಲಿಮರಿಗೆ ದೇಶದ ಸಂಪನ್ಮೂಲಗಳಲ್ಲಿ ಮೊದಲ ಹಕ್ಕು ಎಂದು ಹೇಳಲಿಲ್ಲವೇ ಎಂದು ಭಾಟಿಯಾ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಚುನಾವಣಾ ಲಾಭಕ್ಕಾಗಿ ಕೋಮು ಧ್ರುವೀಕರಣ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಾತನಾಡಿ, ಪ್ರಧಾನಿಯವರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದಿದ್ದನ್ನು ಉಲ್ಲೇಖಿಸುತ್ತಿದ್ದಾರೆ ಮತ್ತು ಅವರು ಚುನಾವಣಾ ಲಾಭಕ್ಕಾಗಿ ದೇಶದಲ್ಲಿ “ಕೋಮು ಧ್ರುವೀಕರಣ” ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!