Wednesday, September 11, 2024

ಮತದಾನ ದಿನದಂದು ತರಬೇತಿ ನಡೆಸುತ್ತಿರುವ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಿ: ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬ0ಧಿಸಿದ0ತೆ ಭಾರತ ಚುನಾವಣಾ ಆಯೋಗವು
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು
ಏಪ್ರಿಲ್ 26 ರಂದು ನಡೆಯಲಿದೆ.

18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಮತದಾನ ಮಾಡುವುದು ಸಂವಿಧಾನ ಬದ್ಧ ಹಕ್ಕು ಆಗಿದ್ದು, ಈ ಸಂದರ್ಭದಲ್ಲಿ ಬಲಾಢ್ಯ
ಪ್ರಜಾಪ್ರಭುತ್ವ ರಾಷ್ಟç ನಿರ್ಮಾಣಕ್ಕಾಗಿ ಎಲ್ಲ ವಿದ್ಯಾರ್ಥಿಗಳು ಮತದಾನ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ
ಚುನಾವಣಾ ಆಯೋಗವು ಏ. 26 ರಂದು ರಜೆ ಘೋಷಿಸಿರುತ್ತದೆ.

ಆದ್ದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತರಬೇತಿ ನಡೆಸುತ್ತಿರುವ ಪದವಿ ಪೂರ್ವ ಶಿಕ್ಷಣ
ಸಂಸ್ಥೆಗಳನ್ನು ಮತದಾನ ದಿನದಂದು ಬಂದ್ ಮಾಡಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಮತ ಚಲಾಯಿಸಲು ಅವಕಾಶ ಕಲ್ಪಿಸುವಂತೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!