Wednesday, September 11, 2024

‘ಕರ್ನಾಟಕಕ್ಕೆ ನ್ಯಾಯ ಕೊಡಿ, ಬರ ಪರಿಹಾರ ಬಿಡುಗಡೆ ಮಾಡಿ ಚೊಂಬೇಶ್ವರ’ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಜನಪ್ರತಿನಿಧಿ (ಬೆಂಗಳೂರು) : ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಅದರಲ್ಲೂ ರೈತ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ. ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಹಣ ಬಿಡುಗಡೆ ಮಾಡಲು ವಿಳಂಬ ಧೋರಣೆ ತಳೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ವಿರುದ್ಧ ಇಂದು (ಮಂಗಳವಾರ) ವಿಧಾನಸೌಧದ ಎದುರು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಜನ ವಿರೋಧಿ ಕೇಂದ್ರ ಸರ್ಕಾರಕ್ಕೆ, ರೈತ ವಿರೋಧಿ ಮೋದಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟ ಸದಸ್ಯರು, ಶಾಸಕರು ಹಾಜರಿದ್ದರು.

‘ಕರ್ನಾಟಕಕ್ಕೆ ನ್ಯಾಯ ಕೊಡಿ, ಬರ ಪರಿಹಾರ ಕೂಡಲೇ ಬಿಡುಗಡೆ ಮಾಡಿ ಚೊಂಬೇಶ್ವರ’ ಎಂದು ಒಕ್ಕೊರಲಿನಿಂದ ಕಾಂಗ್ರೆಸ್ ನಾಯಕರು ಆಗ್ರಹ ಮಾಡಿದರು. ಇಂದು ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ಅಮಿತ್ ಶಾ ಗೋ ಬ್ಯಾಕ್ ಎಂದು ಕೂಗಿ ಪ್ರತಿಭಟನೆಯ ಕಾವು ಹೆಚ್ಚಿಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದರು.

ಬರ ಪರಿಹಾರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ನಿನ್ನೆ(ಸೋಮವಾರ) ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಕರ್ನಾಟಕ್ಕೆ ಸಲ್ಲಬೇಕಾದ ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತು.

https://x.com/ANI/status/1782640028545630491

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!