spot_img
Sunday, February 15, 2026
spot_img

ಬರ ಪರಿಹಾರ : ಶೇಮ್‌ಲೆಸ್‌ ನರೇಂದ್ರ ಮೋದಿ, ಎಂಥಾ ಭಂಡ ಬಾಳು ನಿಮ್ದು ! : ಸಿಎಂ ಟೀಕೆ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕಕ್ಕೆ ಬರ ಪರಿಹಾರ ನೀಡದೇ ವಿಳಂಬ ಮಾಡಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ನಿನ್ನೆ (ಸೋಮವಾರ) ಸುಪ್ರೀಂ ಕೋರ್ಟ್‌ನ ದ್ವೀಸದಸ್ಯ ನ್ಯಾಯಪೀಠ ಶೀಘ್ರವಾಗಿ ಬರ ಪರಿಹಾರ ಮಾಡುವಂತೆ ಸೂಚನೆ ನೀಡಿತ್ತು, ಈ ಬೆನ್ನಲ್ಲೇ ತಮ್ಮ ರಾಜಕೀಯ ವರ್ಚಸ್ಸಿಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಪರಿಹಾರ ಬಿಡುಗಡೆಯ ಶ್ರೇಯ ತನಗೆ ದೊರಕಬೇಕು ಎಂಬ ದೃಷ್ಟಿಯಲ್ಲಿ, “ನೀತಿಸಂಹಿತೆಯ ನಡುವೆಯೂ ರಾಜ್ಯದ ಹಿತ ಮರೆಯದ ಮೋದಿ ಸರ್ಕಾರ! ಬರ ಪರಿಹಾರ ಸಂಬಂಧ ಕೇಂದ್ರ ಸರ್ಕಾರ ಕೇಂದ್ರ ಚುನಾವಣಾ ಆಯೋಗದ ಅನುಮತಿ ಪಡೆದು ಕರ್ನಾಟಕ್ಕೆ ಬರ ಪರಿಹಾರ ಬಿಡುಗಡೆ ಮಾಡಲಿದೆ” ʼಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳುʼ ಎಂದು ರಾಜ್ಯ ಬಿಜೆಪಿ ಹೇಳಿರುವುದನ್ನು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಟೀಕಿಸಿದ ಸಿದ್ದರಾಮಯ್ಯ, ಶೇಮ್‌ಲೆಸ್ ನರೇಂದ್ರ ಮೋದಿ, ಬಿಜೆಪಿ ನಾಯಕರೆ ಎಂದು ಹೀಯಾಳಿಸಿದ್ದಲ್ಲದೇ, ಆಹಾಹಾಹಾ…! ಎಂಥಾ ಭಂಡ ಬಾಳು ನಿಮ್ದು .. ಎಂದು ಅವರು ಟೀಕಿಸಿದ್ದಾರೆ.
https://x.com/siddaramaiah/status/1782688303856464158?t=_ZULT9-7vOMzwVLwVSJj-Q&s=08

ಬರ ಪರಿಹಾರ : ಸುಪ್ರೀಂ ವಿಚಾರಣೆ | ಪರಿಹಾರ ಬಿಡುಗಡೆಗೊಳಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಒಂದು ವಾರದೊಳಗೆ ರಾಜ್ಯದ ರೈತರಿಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನಿನ್ನೆ(ಸೋಮವಾರ) ಒಪ್ಪಿಕೊಂಡಿದೆ.

ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲದ ಕಾರಣ ಸುಪ್ರೀಂಕೋರ್ಟ್​ಗೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ಮಾಡಿತ್ತು.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ನ್ಯಾಯ ಪೀಠಕ್ಕೆ ಪ್ರತಿಕ್ರಿಯಿಸಿ, ಏಪ್ರಿಲ್ 29ರೊಳಗೆ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡ‌ರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್​ 29ಕ್ಕೆ ಮುಂದೂಡಿತು.

ಈ ಬಗ್ಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ʼಎಕ್ಸ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬರ ಪರಿಹಾರ ವಿಳಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಸ್ಥಿಕೆಗೆ ಧನ್ಯವಾದ ಸಲ್ಲಿಸಿದ್ದರು.

2023ರ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ ಬರ ಪರಿಹಾರ ಹಣಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೊಂದು ಮೈಲಿಗಲ್ಲು ಆಗಿದೆ. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಸುಧೀರ್ಘ ಹೋರಾಟಕ್ಕೆ ಯಶಸ್ಸು ದೊರಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದರು.

ಇನ್ನು, ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಅದರಲ್ಲೂ ರೈತ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ. ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಹಣ ಬಿಡುಗಡೆ ಮಾಡಲು ವಿಳಂಬ ಧೋರಣೆ ತಳೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ವಿರುದ್ಧ ಇಂದು (ಮಂಗಳವಾರ) ವಿಧಾನಸೌಧದ ಎದುರು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!