spot_img
Saturday, December 7, 2024
spot_img

ಬರ ಪರಿಹಾರ : ಕಾಂಗ್ರೆಸ್‌ ಪ್ರತಿಭಟನೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು !

ಜನಪ್ರತಿನಿಧಿ (ಬೆಂಗಳೂರು) : ಬರ ಪರಿಹಾರದ ವಿಚಾರ ಮಂದಿಟ್ಟುಕೊಂಡು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್‌ ನಾಯಕರಿಗೆ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟ ರಾಜ್ಯ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಾಗೂ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಮುಖ್ಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ ದೂರಿನಲ್ಲಿ, ಬರ ಪರಿಹಾರ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ಹಾಗೂ ಭಾರತೀಯ ಜನತಾ ಪಾರ್ಟಿಯ ವಿರುದ್ಧ ರಾಜ್ಯ ಕಾಂಗ್ರೆಸ್‌ ಉಸ್ತುವಾರಿಗಳಾಧ ರಣದೀಪ್‌ ಸುರ್ಜೇವಾಲ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧಾ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸುತ್ತೇವೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ಸದರಿ ಬರ ಪರಿಹಾರದ ವಿಚಾರವು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುತ್ತದೆ. ಆಗಿದ್ದಾಗ್ಯೂ ಕೇಂದ್ರ ಸರ್ಕಾರದ ವಿರುದ್ಧ ಅನಧಿಕೃತವಾಗಿ ಪ್ರತಿಭಟಿಸಿ ಮತದಾರರ ಮನಸ್ಸಿನಲ್ಲಿ ಪಕ್ಷದ ವಿರುದ್ಧ ವಿರೋಧಿ ಭಾವನೆ ಉಂಟುಮಾಡಿ ಚುನಾವಣೆಯಲ್ಲಿ ಅಕ್ರಮ ಲಾಭ ಪಡೆಯುವ ಉದ್ದೇಶವನ್ನು ಹೊಂದಿರುತ್ತಾರೆ ಎಂದು ನಿಯೋಗ ಆರೋಪಿಸಿದೆ.

ಮಾತ್ರವಲ್ಲದೇ, ಕಾಂಗ್ರೆಸ್‌ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ರಜನೀಶ್‌ ಗೋಯೆಲ್‌ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಅಮಾನತ್ತು ಮಾಡಿ ತನಿಖೆಗೆ ಆದೇಶ ನೀಡುವಂತೆ ನಿಯೋಗ ಆಗ್ರಹಿಸಿದೆ.

ನಿಯೋಗದಲ್ಲಿ ಪ್ರತಿಪಕ್ಷ ನಾಯಕರಾದ  ಆರ್‌ ಅಶೋಕ್, ಮಾಜಿ ಶಾಸಕರಾದ ಅಖಂಡ ಶ್ರೀನಿವಾಸ್ ವಿಧಾನ ಪರಿಷತ್‌ ಸದಸ್ಯರಾದ ರಮೇಶ್‌ ಗೌಡ, ಮತ್ತು ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!