spot_img
Tuesday, March 31, 2026
spot_img

ರಾಘವೇಂದ್ರ ಬ್ಯಾಂಕ್ ಸಂತ್ರಸ್ತರ ಠೇವಣಿದಾರರಿಗೆ ತನಿಖೆಯ ಭರವಸೆ ನೀಡಿದ ಪ್ರಿಯಾಂಕ ಗಾಂಧಿ !

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಹಾಗೂ ಡಾ. ಶಂಕರ್‌ ಗುಹಾ ನೇತೃತ್ವದ ನಿಯೋಗವು ರಾಘವೇಂದ್ರ ಬ್ಯಾಂಕ್ ಸಂತ್ರಸ್ತರ ಠೇವಣಿದಾರರೊಂದಿಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್‌  ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿ ಮಾಡಿ ಸಕಾಲಿಕ ನ್ಯಾಯವನ್ನು ಪಡೆಯಲು ಅವರ ಮಧ್ಯಸ್ಥಿಕೆಗೆ ಮನವಿ ಮಾಡಿದರು.

ಠೇವಣಿದಾರರಾದ ಹರೀಶ್ ಅವರು ಮಾತನಾಡಿ ಹಗರಣ ಬೆಳಕಿಗೆ ಬಂದು ನಾಲ್ಕು ವರ್ಷಗಳಾದರೂ ಪೂರ್ಣ ಪ್ರಮಾಣದ ಪರಿಹಾರ ಸಿಕ್ಕಿಲ್ಲ, ಇನ್ನೂರಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ, ಸರ್ಕಾರ ಸಿಬಿಐ ತನಿಖೆಗೆ ವಹಿಸಿ ಐದು ತಿಂಗಳಾದರೂ ಇನ್ನೂ ಇನ್ವೆಸ್ಟಿಗೇಟಿಂಗ್ ಆಫೀಸರ್ ನೇಮಕಾತಿಯಾಗಿಲ್ಲ ಎಂದು ಹೇಳಿದರು.

ಪ್ರಿಯಾಂಕ ಗಾಂಧಿಯವರು ಎಲ್ಲಾ ಠೇವಣಿದಾರರಿಗೆ ಭರವಸೆ ನೀಡಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿ ಕಾನೂನಿನ ಚೌಕಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ರಣದೀಪೊ ಸಿಂಗ್‌ ಸುರ್ಜೇವಾಲ ಹಾಗೂ ಸೌಮ್ಯ ರೆಡ್ಡಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ  ಚುನಾವಣೆ ಮುಗಿದ ಕೂಡಲೇ ವಿಶೇಷ ತಂಡವನ್ನು ರಚಿಸಿ ಈ ಎಲ್ಲಾ ಸಹಕಾರಿ ಸಂಸ್ಥೆಗಳ ತನಿಖೆಯನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಎಲ್ಲಾ ಸಂತ್ರಸ್ತ ಠೇವಣಿದಾರರಿಗೆ ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!