spot_img
Wednesday, April 1, 2026
spot_img

ಸಂವಿಧಾನ ಬದಲಾಯಿಸುವುದಿಲ್ಲವೆಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ : ಅಶೋಕ್‌ ಚವ್ಹಾಣ್‌

ಜನಪ್ರತಿನಿಧಿ (ಮುಂಬೈ) : ಸಂವಿಧಾನ ಸಂಬಂಧಿಸಿದಂತೆ ವೈಯಕ್ತಿಕ ಅಭಿಪ್ರಾಯಗಳು ಪ್ರಮುಖವೆನ್ನಿಸುವುದಿಲ್ಲ. ಸಂವಿಧಾನವನ್ನು ಬದಲಾಯಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಷ್ಟವಾಗಿ ಹೇಳಿದ್ದಾರೆಂದು ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್‌ ಚವ್ಹಾಣ್‌ ಹೇಳಿದ್ದಾರೆ.

ವರದಿಗಾರರಿಗೆ ಸ್ಪಂದಿಸಿದ ಅವರು, ಪಕ್ಷದ ನಾಯಕ ಹಾಗೂ ಕರ್ನಾಟಕದ ಸಂಸದ ಅನಂತ್‌ ಕುಮಾರ್‌ ಹೆಗಡೆ ದೇಶದ ಸಂವಿಧಾನ ಬದಲಾಯಿಸುವ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಉಲ್ಲೇಖಿಸಿ, ಸಂವಿಧಾನದ ವಿಷಯದಲ್ಲಿ ವೈಯಕ್ತಿ ಅಭಿಪ್ರಾಯಕ್ಕಿಂತ ಪಕ್ಷದ ಉನ್ನತ ನಾಯಕರು ಏನು ಹೇಳುತ್ತಾರೆನ್ನುವುದು ಮುಖ್ಯ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅನಂತ ಕುಮಾರ್‌ ಹೆಗಡೆ ಅವರಿಗೆ ಬಿಜೆಪಿಯಿಂದ ಟಿಕೇಟ್‌ ಸಿಕ್ಕಿಲಲ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಟಿಕೇಟ್‌ ನಿರಾಕರಿಸಲಾಗಿದೆ ಎಂದು ಚವ್ಹಾಣ್‌ ಹೇಳಿದ್ದಾರೆ.

ಸಂವಿಧಾನದಲ್ಲಿ ತಇದ್ದುಪಡಿ ಮಾಡಲು ಈ ಬಾರಿಯ ಲೋಕಸಭೆ ಹಾಗೂ ರಾಜ್ಯಸಭೆ ಚುನಾವಣೆಗಳಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಗಳಿಸುವ ಮೂಲಕ ಇಪ್ಪತ್ತು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಸಂಸದ ಅನಂತ್‌ ಕುಮಾರ್‌ ಹೆಗಡೆ ಹಲವು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಭಾರಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!