spot_img
Thursday, December 5, 2024
spot_img

ಮೋದಿ ʼತಾಳಿ ಹೇಳಿಕೆʼ ಖಂಡಿಸಿದ ಅಲ್ಪಸಂಖ್ಯಾತ ಮೋರ್ಚಾದ ನಾಯಕನನ್ನು ಉಚ್ಛಾಟಿಸಿದ ಬಿಜೆಪಿ !

ಜನಪ್ರತಿನಿಧಿ (ನವ ದೆಹಲಿ) : ಇತ್ತೀಚೆಗೆ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ಬಿಜೆಪಿ ತನ್ನ ಮುಸ್ಲಿಂ ಮುಖಂಡರೊಬ್ಬರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.

ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿಯನ್ನು ಪಕ್ಷದ ವರ್ಚಸ್ಸಿಗೆ ಕಳಂಕ ತಂದ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿದ ಘನಿ, ರಾಜಸ್ಥಾನದಲ್ಲಿ 25 ಸ್ಥಾನಗಳಲ್ಲಿ 3-4 ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಹೇಳಿದ್ದರು. ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳಲ್ಲಿ ಪ್ರಧಾನಿ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿದ ಹೇಳಿಕೆಗಳನ್ನು ಟೀಕಿಸಿದ್ದರು.

ಮುಸ್ಲಿಮರಿಗೆ ಸಂಬಂಧಿಸಿದಂತೆ ಮೋದಿಯವರ ಹೇಳಿಕೆಯ ಬಗ್ಗೆ ಪತ್ರಕರ್ತರು ಕೇಳಿದ್ದಕ್ಕೆ ಘನಿ ಅವರು ಮುಸ್ಲಿಮನಾದ ನಾನು ಮೋದಿಯವರ ಹೇಳಿಕೆಯಿಂದ ನಿರಾಶೆಗೊಂಡಿದ್ದೇನೆ. ಬಿಜೆಪಿಗೆ ಮತ ಕೇಳಲು ಮುಸ್ಲಿಮರ ಬಳಿ ಹೋದಾಗ ಸಮುದಾಯದ ಜನರು ಪ್ರಧಾನಿಯವರ ಇಂತಹ ಹೇಳಿಕೆಗಳ ಬಗ್ಗೆ ಮಾತನಾಡುತ್ತಾರೆ. ಅಲ್ಲದೆ ನನ್ನಿಂದ ಉತ್ತರ ಕೇಳುತ್ತಾರೆ. ರಾಜ್ಯದಲ್ಲಿ ಜಾಟ್‌ಗಳು ಬಿಜೆಪಿ ವಿರುದ್ಧ ಕೋಪಗೊಂಡಿದ್ದಾರೆ. ಚುರು ಮತ್ತು ಇತರ ಸ್ಥಾನಗಳಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ಘನಿ ಹೇಳಿದರು. ನನ್ನು ಈ ಹೇಳಿಕೆಗೆ ಪಕ್ಷವು ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಂಡರೂ ಹೆದರುವುದಿಲ್ಲ ಎಂದು ಘನಿ ಹೇಳಿದ್ದಾರೆ.

ಘನಿ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬಳಿಕ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಬಿಕಾನೇರ್ ಸಿಟಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರಿಂದ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಜೆಪಿಗೆ ಕಳಂಕ ತರುವ ಪ್ರಯತ್ನ ನಡೆದಿದೆ ಎಂದು ಸಮಿತಿ ಅಧ್ಯಕ್ಷ ಓಂಕಾರ್ ಸಿಂಗ್ ಲಖಾವತ್ ಹೇಳಿದ್ದಾರೆ. ಇದನ್ನು ಅರಿತು ಪಕ್ಷವು ಈ ಕೃತ್ಯವನ್ನು ಅಶಿಸ್ತು ಎಂದು ಪರಿಗಣಿಸಿ ಉಸ್ಮಾನ್ ಘನಿ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಿದೆ.

ಬಿಕಾನೇರ್ ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಏಪ್ರಿಲ್ 19ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಚುನಾವಣಾ ರ್ಯಾಲಿಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಆಸ್ತಿಯನ್ನು ಮುಸ್ಲಿಮರಿಗೆ ಹಂಚುವುದಾಗಿ ಹೇಳಿದ್ದರು. ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಮೋದಿ ಆರೋಪಿಸಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!