Sunday, May 5, 2024

ನೇಹಾ ಕೊಲೆ ಪ್ರಕರಣ : ಸಿಬಿಐಗೆ ವಹಿಸಿ ಎಂದು ಕೇಳಲು ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇಲ್ಲ | ಸಿಐಡಿ ತನಿಖೆ ಚುರುಕು : ಸಿಎಂ

ಜನಪ್ರತಿನಿಧಿ (ಬೀದರ್‌) : ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ. ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದೇವೆ. ಆಕೆಯ ಕುಟುಂಬಕ್ಕೆ ಶೀಘ್ರವೇ ನ್ಯಾಯ ಒದಗಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಸಿಎಂ, ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಕೇಳಲು ಬಿಜೆಪಿ ನಾಯಕರಿಗೆ ಯಾವ ನೈತಿಕ ಹಕ್ಕು ಇದೆ, ಹಿಂದೆ ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐ ವಹಿಸಿದೆಯೇ ಎಂದು ಪ್ರಶ್ನಿಸಿದರು.

ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದರು.

ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐ (CBI) ಗೆ ವಹಿಸಿದ್ದೇನೆ. ಬಿಜೆಪಿಯವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ. ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ., ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.

ಇಂದು ನೇಹಾ ನಿವಾಸಕ್ಕೆ ಸಿಎಂ: ಮೊನ್ನೆ ಏಪ್ರಿಲ್ 18ರಂದು ಸಹಪಾಠಿಯಿಂದ ಹತ್ಯೆಗೀಡಾದ ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ನಿವಾಸಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅವರ ತಂದೆ ನಿರಂಜನ್ ಹಿರೇಮಠ, ತಾಯಿ ಗೀತಾ ಹಿರೇಮಠ ಅವರಿಗೆ ಸಾಂತ್ವನ ಹೇಳಲಿದ್ದಾರೆ. ಈ ಹಿನ್ನೆಲೆಯಲ್ಲಿ ನೇಹಾ ನಿವಾಸ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!