spot_img
Wednesday, April 1, 2026
spot_img

ಮುಸ್ಲೀಮರಿಗೆ ದೇಶದ ಸಂಪತ್ತು ಹಂಚಿಕೆ ಹೇಳಿಕೆ : ಮೋದಿ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ಕೇಳಿದ ಚುನಾವಣಾ ಆಯೋಗ !

ಜನಪ್ರತಿನಿಧಿ (ನವದೆಹಲಿ) :  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂದು ರಾಜಸ್ಥಾನದ ಚುನಾವಣಾ ರ್‍ಯಾಲಿಯೊಂದರಲ್ಲಿ  ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗ ಇಂದು(ಗುರುವಾರ) ಬಿಜೆಪಿಗೆ ಸೂಚಿಸಿದೆ.

ಮೋದಿ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ನೀಡಿರುವ ದೂರಿನ ಮೇರೆಗೆ ಚುನಾವಣಾ ಆಯೋಗ ಬಿಜೆಪಿಯಿಂದ ಪ್ರತಿಕ್ರಿಯೆ ಕೇಳಿದೆ.

ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂಬುದನ್ನು ಚುನಾವಣಾ ಆಯೋಗ ಗಮನಿಸಿದೆ. ಪ್ರಧಾನಿ ಮೋದಿ, ರಾಹುಲ್ ಗಾಂಧಿ ವಿರುದ್ಧದ ನೀತಿ ಸಂಹಿತ ಉಲ್ಲಂಘನೆ ಆರೋಪಗಳನ್ನು ಬಿಜೆಪಿ, ಕಾಂಗ್ರೆಸ್ ಮುಖ್ಯಸ್ಥರೊಂದಿಗೆ ಚುನಾವಣಾ ಹಂಚಿಕೊಂಡಿದೆ ಮತ್ತು ಏಪ್ರಿಲ್ 29 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚನೆ ನೀಡಿದೆ.

ಉನ್ನತ ಹುದ್ದೆಯಲ್ಲಿರುವವರ ಭಾಷಣಗಳು ಹೆಚ್ಚು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಚುನಾವಣಾ ಆಯೋಗ ಹೇಳಿದೆ.

ಪ್ರಧಾನಿ ಮೋದಿ ಹೇಳಿಕೆ “ಒಡಕುಂಟು ಮಾಡುವ”, “ದುರುದ್ದೇಶಪೂರಿತ” ಮತ್ತು ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿದೆ ಎಂದು ಆರೋಪಿಸಿ ಕಳೆದ ಸೋಮವಾರ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!