Sunday, September 8, 2024

ಕರ್ನಾಟಕದಲ್ಲಿ ಕಾಂಗ್ರೆಸ್‌ ಮುಸ್ಲೀಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿದೆ : ಮೋದಿ

ಜನಪ್ರತಿನಿಧಿ (ನವ ದೆಹಲಿ) : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅನೇಕ ಮುಸ್ಲೀಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ಗಂಭೀರ ಆರೋಪ ಮಾಡಿದ್ದಾರೆ.

ಮಧ್ಯಪ್ರದೇಶದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್‌ ಪಕ್ಷ ದೇಶದಲ್ಲಿ ಪಿತ್ರಾರ್ಜಿತ ಆಸ್ತಿ ಮೇಲೆ ತೆರಿಗೆ ಹೇರಲು ಹೊರಟಿದೆ ಎಂದು ಪ್ರಧಾನಿ ಮೋದಿ ಪುನರುಚ್ಛರಿಸಿದ್ದಾರೆ.

ಮುಸ್ಲೀಂ ಎನ್ನುವ ಕಾರಣಕ್ಕೆ ಮಾತ್ರ ಉಚಿತ ರೇಷನ್‌ ಪಡೆಯುತ್ತಾರೆ ಎಂಬುವುದನ್ನು ನೀವು ಎಂದಾದರೂ ಕೇಳಿದ್ದಾರಾ? ದೇಶದ ಸಂಪತ್ತಿನ ಮೇಲೆ ಮುಸ್ಲೀಮರೊಗೆ ಮೊದಲ ಹಕ್ಕಿದೆ ಎಂದು ಕಾಂಗ್ರೆಸ್‌ ಹೇಳುತ್ತದೆ. ಆದರೇ ಬಡವರಿಗೆ ಮೊದಲ ಹಕ್ಕು ಎಂದು ನಾವು ಹೇಳುತ್ತೇವೆ ಎಂದು ಮೋದಿ ಹೇಳಿದ್ದಾರೆ.

ಆದಿವಾಸಿಗಳು ಮತ್ತು ಹಿಂದುಳಿದ ವರ್ಗದವರ ಹಕ್ಕುಗಳನ್ನು ಕಸಿದುಕೊಳ್ಳಲು ಕಂಗ್ರೆಸ್‌ ಹಲವು ವರ್ಷಗಳಿಂದ ಸಂಚು ರೂಪಿಸುತ್ತಿದೆ. ಹಿಂದುಳಿದ ವರ್ಗಗಳ ಹಕ್ಕುಗಳನ್ನು ಕಸಿದುಕೊಳ್ಳುವವರನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗುವುದು ಎಂದು ಮೋದಿ ಎಚ್ಚರಿಸಿದ್ದಾರೆ.

ಬಿಜೆಪಿ ಪಾಲಿಗೆ ದೇಶಕ್ಕಿಂತ ಮಿಗಿಲಾಗಿ ಬೇರೊಂದಿಲ್ಲ. ಆದರೇ ಕಾಂಗ್ರೆಸ್‌ಗೆ ಕುಟುಂಬವೇ ಮುಖ್ಯವೆನ್ನಿಸಿದೆ ಎಂದು ಮೋದಿ ಟೀಕಿಸಿದ್ದಾರೆ.
https://x.com/PTI_News/status/1783389278652751917

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!