spot_img
Sunday, February 15, 2026
spot_img

ನಾವುಂದ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನಕ್ಕೆ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಭೇಟಿ

ಬೈಂದೂರು: ನಾವುಂದ ಸಪರಿವಾರ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನ ಹಾಗೂ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ಭಜನಾ ಮಂದಿರಕ್ಕೆ ಉಡುಪಿ ಕಾಣಿಯೂರು ಮಠ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಗುರುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಶ್ರೀರಾಮ ಭಜನೆ ದೀಪ ಸ್ಥಾಪನೆ ಮಾಡಿ ಆಶೀರ್ವಚನ ನೀಡಿದರು.

ದೇವರು ನಮಗೆ ರಕ್ಷಕನಾಗಿ ಇರುವನು ಎನ್ನುವ ವಿಶ್ವಾಸ ನಮ್ಮಲ್ಲಿ ಮೂಡುವಂತಾಗಬೇಕು. ದೇವರ ಸ್ಮರಣೆಯಿಂದ ಜೀವನದಲ್ಲಿ ಕಷ್ಟ ಮತ್ತು ಸುಖವನ್ನು ಸಮಾನವಾಗಿ ಅನುಭವಿಸಲು ಸಾಧ್ಯವಿದೆ ಎಂದು ಶ್ರೀಗಳು ಆಶೀರ್ವಚನ ನುಡಿಗಳನ್ನಾಡಿದರು.

ಸ್ವಾಮೀಜಿಯವರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಅವರನ್ನು ಅದ್ದೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!