spot_img
Wednesday, April 1, 2026
spot_img

ದ್ವಿತೀಯ ಪಿಯುಸಿ ಪರೀಕ್ಷೆ ಮರು ಮೌಲ್ಯ ಮಾಪನ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಅವಿಭಜಿತ ಕುಂದಾಪುರ ತಾಲೂಕಿನಲ್ಲಿ ಪ್ರಥಮ: 11 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 Rank

ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, 11 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ಸ್ಥಾನ ಪಡೆಯುವುದರ ಮೂಲಕ ಸಾಧನೆ ಮೆರೆದಿದೆ.

ವಾಣಿಜ್ಯ ವಿಭಾಗದಲ್ಲಿ ವಿನಯ್ ಶ್ಯಾನುಭಾಗ್ 593 ಅಂಕದೊಂದಿಗೆ ರಾಜ್ಯಕ್ಕೆ 5ನೇ ಸ್ಥಾನ ಪಡೆದು ತಾಲೂಕಿಗೆ ಪ್ರಥಮ ಸ್ಥಾನ.
ವಿಜ್ಞಾನ ವಿಭಾಗದಲ್ಲಿ ಶ್ರೀ ಲಕ್ಷ್ಮಿ ಹೆಬ್ಬಾರ್ 593 ಅಂಕದೊಂದಿಗೆ ರಾಜ್ಯಕ್ಕೆ 6 ನೇ ಸ್ಥಾನ ಪಡೆದು ತಾಲೂಕಿಗೆ ಪ್ರಥಮ ಸ್ಥಾನ.
ಈ ಇಬ್ಬರು ವಿದ್ಯಾರ್ಥಿಗಳು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಅಭೂತಪೂರ್ವ ಸಾಧನೆ ಮೆರೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಸಂಜನಾ ಹಾಗೂ ಮಾನ್ಯ 592 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 7 ನೇ rank, ಸುಜಯಾ ಎಚ್ ಮತ್ತು ಅನಿರುದ್ದ್ ಶೇಟ್ 591 ಅಂಕಗಳೊಂದಿಗೆ 8 ನೇ rank, ಪೂಜಾ ಕಾರಂತ 590 ಅಂಕಗಳೊಂದಿಗೆ 9ನೇ rank, ನಮ್ರತಾ 589 ಅಂಕಗಳೊಂದಿಗೆ 10 ನೇ rank, ಪಡೆದಿರುತ್ತಾರೆ .

ವಾಣಿಜ್ಯ ವಿಭಾಗದಲ್ಲಿ ಆಯೇಷಾ ಮುಸ್ಕಾನ್ ಮತ್ತು ಸಿಂಚನಾ 590 ಅಂಕಗಳೊಂದಿಗೆ 8ನೇ rank, ಶ್ರದ್ದಾ 588 ಅಂಕಗಳೊಂದಿಗೆ 10 ನೇ rank, ಪಡೆದು ರಾಜ್ಯದ ಅಗ್ರ ಸ್ಥಾನಿಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!