spot_img
Wednesday, April 1, 2026
spot_img

ಉಡುಪಿ ಚಿಕ್ಕಮಗಳೂರಿನ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ.76.06 ರಷ್ಟು ಮತ ಚಲಾವಣೆ !

ಜನಪ್ರತಿನಿಧಿ (ಉಡುಪಿ ಚಿಕ್ಕಮಗಳೂರು) : ರಾಜ್ಯದಲ್ಲಿ ಇಂದು(ಶುಕ್ರವಾರ) ಮೊದಲನೇ ಹಂತದ ಚುನಾವಣೆ ನಡೆದಿದೆ. ಮೊದಲನೇ ಹಂತದ ಚುನಾವಣೆಯಲ್ಲಿ ರಾಜ್ಯದ ಒಟ್ಟು 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಆ ಪೈಕಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವೂ ಕೂಡ ಒಂದು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳ ಕಾಲ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್‌ ಅಭಿಯಾನ ನಡೆದ ಕಾರಣ ಇಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿಯಿಂದ ಟಿಕೇಟ್‌ ಲಭ್ಯವಾಗಿದೆ. ಕಾಂಗ್ರೆಸ್‌ ಕೂಡ ಈ ಬಾರಿಯ ಲೋಕಸಭಾ ಚುನಾವಣೆಯನ್ನು ಕ್ಷೇತ್ರದಲ್ಲಿ ಸವಾಲಾಗಿ ತೆಗೆದುಕೊಂಡಿದ್ದು ಮಾಜಿ ಸಂಸದ ಕೆ. ಜಯಪ್ರಕಾಶ್‌ ಹೆಗ್ಡೆ ಅವರು ಮರಳಿ ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಮತ್ತು ಅವರೇ ಇಲ್ಲಿನ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವುದರಿಂದ ಕ್ಷೇತ್ರವನ್ನು ಗೆಲ್ಲಲೇ ಬೇಕೆಂಬ ಪಣ ತೊಟ್ಟು ಚುನಾವಣೆಯನ್ನು ಎದುರಿಸಿದೆ.

ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರಗಳು ಬಿಜೆಪಿಯ ತೆಕ್ಕೆಯಲ್ಲಿವೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ ಹಾಗೂ ತರಿಕೆರೆ ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್‌ ವಶದಲ್ಲಿವೆ. ಕ್ಷೇತ್ರದಲ್ಲಿ ಜಾತಿ ಲೆಕ್ಕಚಾರದಲ್ಲಿಯೂ ಚುನಾವಣಾ ಪ್ರಚಾರ ಜೋರಾಗಿಯೇ ನಡೆದಿತ್ತು. ಉಭಯ ಪಕ್ಷಗಳಲ್ಲಿಯೂ ಅಭ್ಯರ್ಥಿಯ ವಿಚಾರದಲ್ಲಿ ಆರಂಭದಲ್ಲಿ ಸ್ವಲ್ಪ ಅಸಮಾಧಾನವಿತ್ತು. ದಿನಕಳೆದಂತೆ ಅವೆಲ್ಲವೂ ಬದಿಗೆ ಸರಿಸಿ ಬಿಜೆಪಿ  ಹಿಂದುತ್ವ ಹಾಗೂ ಕಾಂಗ್ರೆಸ್ ಅಭಿವೃದ್ಧಿಯ ವಿಚಾರಗಳ ಮೇಲೆ ಪ್ರಚಾರ ಮಾಡಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿವೆ.

ವೈಯಕ್ತಿಕ ರಾಜಕೀಯ ವರ್ಚಸ್ಸು, ಸರಳತೆ, ಸಿಂಪಲ್‌, ಸಜ್ಜನಿಕೆ, ಕಾಂಗ್ರೆಸ್‌ ಗ್ಯಾರಂಟಿ, ಅಭಿವೃದ್ಧಿ ಯೋಜನೆಗಳು, ಮೋದಿ ಗ್ಯಾರಂಟಿ, ಹಿಂದುತ್ವ, ರಾಮ ಮಂದಿರ, ಮೋದಿ ಹವಾದ ಮೇಲೆ ಇಲ್ಲಿ ರಾಜಕೀಯ ಪ್ರಚಾರಗಳು ತಾರರಕ್ಕೇರಿದ್ದವು. ಸದ್ಯ, ಉಡಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ನಡೆದಿದೆ. ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮತದಾರ ಯಾರ ಕಡೆಗೆ ಒಲಿದಿದ್ದಾರೆ ಎಂದು ತಿಳಿಯ ಬೇಕಾದರೇ, ಫಲಿತಾಂಶ ಬರುವವರೆಗೆ ಕಾಯಲೇಬೇಕಿದೆ.

ಉಡುಪಿ-ಚಿಕ್ಕಮಗಳೂರಿನಲ್ಲಿ ವಿಧಾನಸಭಾ ಕ್ಷೇತ್ರವಾರು ಒಟ್ಟು ಮತ ಪ್ರಮಾಣ :

ಚಿಕ್ಕಮಗಳೂರು – ಶೇ. 69.00
ಕಾರ್ಕಳ – ಶೇ. 78.50
ಕಾಪು – ಶೇ.79.02
ಕುಂದಾಪುರ – ಶೇ.79.10
ಮೂಡಿಗೆರೆ – ಶೇ.75.12
ಶೃಂಗೇರಿ – ಶೇ. 80.26
ತರಿಕೆರೆ – ಶೇ. 73.25
ಉಡುಪಿ – ಶೇ.75.84

ಒಟ್ಟು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಶೇ.76.06 ರಷ್ಟು ಮತ ಚಲಾವಣೆಯಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!