spot_img
Wednesday, April 1, 2026
spot_img

ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಘೋಷಣೆ ಮಾಡಿದ ಕೇಂದ್ರ ಸರ್ಕಾರ !

ಜನಪ್ರತಿನಿಧಿ (ನವದೆಹಲಿ) : ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಕರ್ನಾಟಕದಲ್ಲಿ ಮುಕ್ತಾಯವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದಿದ್ದು ಇನ್ನು 14 ಕ್ಷೇತ್ರಗಳಿಗೆ ಚುನಾವಣೆ ಆಗಬೇಕಿದೆ.

ಕರ್ನಾಟಕದಲ್ಲಿ ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿ ರೈತರು ಸಂಕಷ್ಟ ಅನುಭವಿಸಿದ್ದರು. ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,172 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳುಗಳೇ ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ದಾಖಲೇ ಸಮೇತ ಕೇಂದ್ರ ಸರ್ಕಾರವನ್ನು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತೆರಿಗೆ ಪಾಲು ಹಾಗೂ ಬರ ಪರಿಹಾರ ನೀಡಿಲ್ಲ ಎಂದು ಗಂಭೀರವಾಗಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು.  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸಹಿತ ಸಂಪುಟ ಸಚಿವರು ಆರೋಪಿಸಿದ್ದರು.

ಪ್ರಧಾನಿ ಮೋದಿ ಬರ ಪರಿಹಾರ ನೀಡದೇ ಇರುವ ಕಾರಣಕ್ಕೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಅದರಂತೆ ಕಳೆದ ವಾರ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್​ನಲ್ಲಿ ಒಪ್ಪಿಕೊಂಡಿತ್ತು. ಅದರಂತೆ ಸದ್ಯ ಕೇಂದ್ರ ಸರ್ಕಾರ ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂಪಾಯಿ ಪರಿಹಾರವನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!