spot_img
Wednesday, April 1, 2026
spot_img

ಜೆಇಇ ಮೈನ್ಸ್ 2ನೇ ಪ್ರವೇಶ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನದೊಂದಿಗೆ ಜಿಲ್ಲೆಯಲ್ಲಿಯೇ ವಿಶಿಷ್ಟ ಸಾಧನೆ ಮೆರೆದ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು

ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ 2ನೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ.ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2024 ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಬಿ.ಆರ್ಚ್(99.744) ಪರ್ಸಂಟೈಲ್ ಪಡೆದು ಜಿಲ್ಲೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾಳೆ.

ಜೆಇಇ 2ನೇ ಪ್ರವೇಶ ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಣವ್ ಅಡಿಗ 95.33 ಪರ್ಸಂಟೈಲ್( 97.12) ಪರ್ಸಂಟೈಲ್(ಭೌತಶಾಸ್ತ್ರ)ಆದಿತ್ಯ ಸಿ.ಚಂದನ್ 95.97 ಪರ್ಸಂಟೈಲ್, ಆಕಾಶ್ ಹೆಬ್ಬಾರ್ 95.84, ಲಲನ್ ಪಿ. 93.15 ಪರ್ಸಂಟೈಲ್,ಪ್ರಜ್ವಲ್ ಎಸ್.ಪೂಜಾರಿ 93.02 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!