spot_img
Saturday, February 14, 2026
spot_img

ಬಾಳೆಕುದ್ರು ಶ್ರೀ ಮಠಕ್ಕೆ ಹರಿಹರಪುರ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಭೇಟಿ

ಸಾಸ್ತಾನ: ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠಕ್ಕೆ ಚಿಕ್ಕಮಗಳೂರು ಹರಿಹರಪುರ ಶ್ರೀಶ್ರೀಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನ ಜಯೇಂದ್ರಪುರಿ ಸ್ವಾಮೀಜಿ ಭೇಟಿ ನೀಡಿ ಶ್ರೀ ಮಠದ ನೃಸಿಂಹಾಶ್ರಮ ಸ್ವಾಮೀಜಿಯರನ್ನು ಭೇಟಿ ಮಾಡಿ ಕುಶಲೋಪರಿಗೈದರು.

ಮಠಕ್ಕೆ ಆಗಮಿಸುತ್ತಿದ್ದಂತೆ ವಾದ್ಯಘೋಷಗಳೊಂದಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ಶ್ರೀ ಮಠದ ಲಕ್ಷ್ಮೀ ನರಸಿಂಹನಿಗೆ ವಿಶೇಷ ಪೂಜೆ ಸಲ್ಲಿಸಿ ನೆರದಿದ್ದ ಭಕ್ತಾಧಿಗಳಿಗೆ ಆಶ್ರೀಚನ ನೀಡಿ ಮಂತ್ರಾಕ್ಷತೆ ನೀಡಿದರು.
ಸ್ವಾಮೀಜಿ ಆಗಮನದ ಹಿನ್ನಲೆಯಲ್ಲಿ ಕುಂದಾಪುರ ತಾಲೂಕು ಭಜನಾ ಒಕ್ಕೂಟದ ಶ್ರೀ ಕುಂದೇಶ್ವರ ಭಜನಾ ಮಂಡಳಿ, ಬ್ರಹ್ಮಶ್ರೀ ನಾರಾಯಣಗುರು ಭಜನಾ ಮಂಡಳಿ ಹಂಗಾರಕಟ್ಟೆ ಇವರುಗಳಿಂದ ಭಜನೆ, ರಾಮ ಕ್ಷತ್ರಿಯ ಮಹಿಳಾ ಮಂಡಳಿ ಕುಂದಾಪುರ ಇವರಿಂದ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಠದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜಶೇಖರ ಕಲ್ಕೂರ,ಸದಸ್ಯರಾದ ಪಾಮರ ಚಡಗ,ಮಠದ ವ್ಯವಸ್ಥಾಪಕಾರ ಮಂಜುನಾಥ ಭಟ್ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!