spot_img
Saturday, February 14, 2026
spot_img

ಮೇ 1ರಂದು ಕಿರಿಮಂಜೇಶ್ವರದಲ್ಲಿ ನೈಜ ಹಿಂದೂವಾದಿಗಳ ವಿಜಯ ಸಂಕಲ್ಪ ಸಮಾವೇಶ

ಬೈಂದೂರು: ರಾಷ್ಟ್ರಭಕ್ತರ ಬಳಗದ ವತಿಯಿಂದ ಮೇ C ಬುಧವಾರ ಬೆಳಿಗ್ಗೆ 10-30ಕ್ಕೆ ಕಿರಿಮಂಜೇಶ್ವರದಲ್ಲಿ ವಿಜಯ ಸಂಕಲ್ಪ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಸುಮಾರು 10ಸಾವಿರಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಹೊಂದಲಾಗಿದೆ ಎಂದು ರಾಷ್ಟ್ರಭಕ್ತರ ಬಳಗದ ಕೃಷ್ಣ ಬಿಜೂರು ಹೇಳಿದರು.

ಅವರು ಸೋಮವಾರ ಉಪ್ಪುಂದದಲ್ಲಿರುವ ರಾಷ್ಟ್ರಭಕ್ತರ ಬಳಗದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ವಿಜಯ ಸಂಕಲ್ಪ ಸಮಾವೇಶದಲ್ಲಿ ಮೀನುಗಾರರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರನ್ನು ಸನ್ಮಾನಿಸಲಿದ್ದಾರೆ. ರಾಷ್ಟ್ರಭಕ್ತರ ಬಳಗದ ವತಿಯಿಂದ 10 ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುವುದು. ಮುಳುಗುತಜ್ಞ ದಿನೇಶ ಖಾರ್ವಿ ಗಂಗೊಳ್ಳಿ ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ಹೇಳಿದರು.

ಶ್ರೀಧರ ಬಿಜೂರು ಬೆಂಬಲ ಹಿಂಪೆಡೆದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಅವರು ಏಕೆ ಹೇಳಿದರು, ಅವರ ಉದ್ದೇಶ ಎನು ಅಂತ ನಮಗೆ ಗೊತ್ತಿಲ್ಲ. ಅದು ಅವರ ವೈಯಕ್ತಿಕ ವಿಚಾರ. ನಾವೆಲ್ಲಾ ನೈಜ ಹಿಂದುತ್ವವಾದಿಗಳು. ಕೆ.ಎಸ್ ಈಶ್ವರಪ್ಪನವರು ಹೇಳಿದಂತೆ ನರೇಂದ್ರ ಮೋದಿಯವರ ಪ್ರತಿಯೊಂದು ಕಾರ್ಯವನ್ನು ಮೆಚ್ಚಿಕೊಂಡು ಅವರನ್ನು ಬೆಂಬಲಿಸುತ್ತಿದ್ದೇವೆ. ನಾವು ಸಾಮಾನ್ಯ ಕಾರ್ಯಕರ್ತರು, ನಾವು ಮುನ್ನೆಡಿಸಿಕೊಂಡು ಹೋಗುತ್ತೇವೆ ಎಂದರು.

ಈಗಾಗಲೇ ನಾವು 200 ಬೂತ್‌ಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಮಾಡಿದ್ದೇವೆ. ಕ್ಷೇತ್ರದಲ್ಲಿ ಹಿಂದುತ್ವದ ಅಲೆಯೇ ಎದ್ದಿದೆ. ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ವಿನೋದ್ ರಾಜ್, ಉಮೇಶ ಬಿಜೂರು, ಮೋಹನ್, ಜಗದೀಶ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!