spot_img
Wednesday, January 22, 2025
spot_img

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಕರಣದ ಬಗ್ಗೆ ಮೋದಿ ಮೌನವೇಕೆ ? : ಪ್ರಿಯಾಂಕ ಗಾಂಧಿ ಪ್ರಶ್ನೆ

ಜನಪ್ರತಿನಿಧಿ (ನವದೆಹಲಿ) : ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಮೊಮ್ಮಗ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗುತ್ತಿರುವ ಲೈಂಗಿಕ ದೌರ್ಜನ್ಯ ವಿರುದ್ಧ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಈ ವಿಚಾರದ ಬಗ್ಗೆ ಮೌನ ವಹಿಸಿರುವುದೇಕೆ ಎಂದು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಕಟುವಾಗಿ ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರೊಬ್ಬರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರಿಗೆ ಪತ್ರ ಬರೆದು ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಇರುವ ಪೆನ್ ಡ್ರೈವ್‌ನ ಉಪಸ್ಥಿತಿ ಬಗ್ಗೆ ಹೇಳಿದ ನಂತರವೂ ಬಿಜೆಪಿಯು ಜೆಡಿಎಸ್‌ನೊಂದಿಗೆ ಮೈತ್ರಿಗೆ ಏಕೆ ಮುಂದಾಯಿತು ಎಂದು ವಿರೋಧ ಪಕ್ಷ ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಎಚ್‌ಡಿ ರೇವಣ್ಣ ಅವರ ಮಗ ಮತ್ತು ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಿನ್ನೆ(ಭಾನುವಾರ) ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ.

ಅವರ ಬಳಿ ಕೆಲಸ ಮಾಡಲು ಪ್ರಾರಂಭಿಸಿದ ನಾಲ್ಕು ತಿಂಗಳ ನಂತರ ಪ್ರಜ್ವಲ್ ರೇವಣ್ಣ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಹಾಗೂ ಪ್ರಜ್ವಲ್ ತನ್ನ ಮಗಳಿಗೆ ವಿಡಿಯೋ ಕರೆ ಮಾಡಿ ‘ಅಶ್ಲೀಲ ಸಂಭಾಷಣೆ’ ನಡೆಸುತ್ತಿದ್ದರು ಎಂದು ಅವರ ಅಡುಗೆಯವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯಲ್ಲಿ ಹಿಂದಿ ಭಾಷೆಯಲ್ಲಿ ಈ ಪ್ರಕರಣವನ್ನು ಟೀಕಿಸಿರುವ ಪ್ರಿಯಾಂಕಾ ಗಾಂಧಿ, ‘ಪ್ರಧಾನಿ ನರೇಂದ್ರ ಮೋದಿಯವರು ಅವರ ಭುಜದ ಮೇಲೆ ಕೈಯಿಟ್ಟು ಫೊಟೋ ತೆಗೆಸಿಕೊಂಡಿದ್ದ ನಾಯಕ. 10 ದಿನಗಳ ಹಿಂದೆ ಸ್ವತಃ ಪ್ರಧಾನಿಯೇ ಅವರ ಪರವಾಗಿ ಪ್ರಚಾರ ಮಾಡಿದ್ದರು. ವೇದಿಕೆಯಲ್ಲಿ ಹೊಗಳಿಸಿಕೊಂಡಿದ್ದ ಕರ್ನಾಟಕದ ಆ ನಾಯಕ ಇಂದು ದೇಶದಿಂದ ತಲೆಮರೆಸಿಕೊಂಡಿದ್ದಾರೆ’ .

ಆ ಪತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಬಗ್ಗೆ ಹೇಳಲಾಗಿತ್ತು. ಹೀಗಿದ್ದರೂ, ಬಿಜೆಪಿ ಇನ್ನೂ ಏಕೆ ಜೆಡಿಎಸ್ ಜೊತೆಗೆ ಮೈತ್ರಿ ಮುಂದುವರಿಸಿದೆ? ಸರಣಿ ಅತ್ಯಾಚಾರದ ವಿಡಿಯೋ ರೆಕಾರ್ಡ್ ಮಾಡಿ ಪೆನ್-ಡ್ರೈವ್‌ನಲ್ಲಿ ಇಟ್ಟಿರುವ ಬಗ್ಗೆ ಏಕೆ ಕ್ರಮ ಕೈಗೊಂಡಿಲ್ಲ? ಈ ವಿಚಾರ ತಿಳಿದಿದ್ದರೂ ಪ್ರಧಾನಿ ಅವರ ಪರ ಪ್ರಚಾರ ಮಾಡಿ, ಪ್ರಜ್ವಲ್ ರೇವಣ್ಣ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು ಏಕೆ? ಪ್ರಶ್ನೆ ಮಾಡಿದ್ದಾರೆ.

https://x.com/priyankagandhi/status/1784827037943050396

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!