Saturday, October 12, 2024

ಸಂವಿಧಾನ ಇರುವವರೆಗೆ ಬಿಜೆಪಿ ದುರುದ್ದೇಶ ಈಡೇರಲ್ಲ : ಬಿ.ಬಿ ನಿಂಗಯ್ಯ

ಜನಪ್ರತಿನಿಧಿ (ಕಿರಿಮಂಜೇಶ್ವರ) : ಕಾಂಗ್ರೆಸ್ ದೇಶಕ್ಕಾಗಿ ಎಲ್ಲವನ್ನೂ ಕೊಟ್ಟಿದೆ. ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಮಾಡುವುದೇ ಬಿಜೆಪಿಯ ಗುರಿ ಎಂದು ಬಿಜೆಪಿಯ ನಾಯಕರು ಹಾಗೂ ಮೋದಿ ಹೇಳಿದ್ದಾರೆ. ಸಂವಿಧಾನ ಬದಲಾಯಿಸುತ್ತೇವೆ ಎಂದು ಬಿಜೆಪಿಯ ಸಂಸದರು, ನಾಯಕರು ಹೇಳಿದ್ದಾರೆ. ಸಂವಿಧಾನ ಇರುವವರೆಗೆ ಬಿಜೆಪಿಯ ದುರುದ್ದೇಶ ಈಡೇರಲ್ಲ ಎಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಬಿ ನಿಂಗಯ್ಯ ಹೇಳಿದರು.

ಅವರು ಕಿರಿಮಂಜೇಶ್ವರದಲ್ಲಿ ಇಂದು(ಮಂಗಳವಾರ) ನಡೆದ ಕಾಂಗ್ರೆಸ್ ಬೃಹತ್ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವ ತುರ್ತು ಅಗತ್ಯವಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸುವುದಕ್ಕೆ ಯಾವುದಾದರೂ ಒಂದು ಪಕ್ಷಕ್ಕೆ ಯೋಗ್ಯತೆ ಇದೆ ಎಂದರೇ ಅದು ಕಾಂಗ್ರೆಸ್ ಗೆ ಮಾತ್ರ. ರಾಜ್ಯ ಸರ್ಕಾರದ ಗ್ಯಾರಂಟಿ  ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಮನೆ ಮನೆಗೆ ತಲುಪಿಸಿದೆ. ಮಹಿಳೆಯರು ಕಾಂಗ್ರೆಸ್ ಪರವಾಗಿದ್ದಾರೆ‌. ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸಹೋದರಿ ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದರು.

ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌, ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌, ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರುಗಳಾದ ಕೆ. ಗೋಪಾಲ ಪೂಜಾರಿ, ಬೈಂದೂರು ಸುಕುಮಾರ್‌ ಶೆಟ್ಟಿ, ಕಾರ್ಕಳ ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ, ಕಾಂಗ್ರೆಸ್‌ ನಾಯಕಿ ಮಮತಾ ಗಟ್ಟಿ, ಶೃಂಗೇರಿ ಶಾಸಕ ಟಿ. ಡಿ ರಾಜೇ ಗೌಡ, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಉಡುಪಿ‌ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ರಾಜು ಪೂಜಾರಿ, ಕಾಂಗ್ರೆಸ್‌ ಮುಖಂಡರಾದ ಕೆ. ಪ್ರಕಾಶ್ಚಂದ್ರ ಶೆಟ್ಟಿ, ಗೌರಿ ದೇವಾಡಿಗ ಸೇರಿ, ಸುಬ್ರಹ್ಮಣ್ಯ ಭಟ್‌ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!