Sunday, October 13, 2024

ಮೋದಿ ರಾಜಕೀಯ ಕುಟುಂಬದ ಭಾಗವಾಗಿರುವುದೇ “ಅಪರಾಧಿಗಳಿಗೆ ರಕ್ಷಣೆಯ ಗ್ಯಾರಂಟಿ”… : ರಾಗಾ ವಾಗ್ದಾಳಿ

ಜನಪ್ರತಿನಿಧಿ (ನವದೆಹಲಿ) : ಜೆಡಿಎಸ್ ನಾಯಕ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು(ಬುಧವಾರ) ತೀವ್ರ ವಾಗ್ದಾಳಿ ಮಾಡಿದ್ದಾರೆ. ಮೋದಿ ಅವರ ರಾಜಕೀಯ ಕುಟುಂಬದ” ಭಾಗವಾಗಿರುವುದರಿಂದ “ಅಪರಾಧಿಗಳಿಗೆ ರಕ್ಷಣೆಯ ಗ್ಯಾರಂಟಿ” ನೀಡಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಹೆಚ್ ಡಿ ರೇವಣ್ಣ ವಿರುದ್ಧ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ದೂರಿನ ಆಧಾರದ ಮೇಲೆ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಕರ್ನಾಟಕದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಹಿಸಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

ಈ ವಿವಾದಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಉತ್ತರಿಸಬೇಕು: ಎಲ್ಲ ಗೊತ್ತಿದ್ದರೂ ನೂರಾರು ಹೆಣ್ಣುಮಕ್ಕಳನ್ನು ಶೋಷಿಸುವ ದೆವ್ವದ ಪರ ಪ್ರಚಾರ ಮಾಡಿದ್ದು ಯಾಕೆ? ಅಷ್ಟಕ್ಕೂ ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಆರಾಮಾಗಿ ಪರಾರಿಯಾಗೋದು ಹೇಗೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ ಮತ್ತು ಉನ್ನಾವೊದಿಂದ ಉತ್ತರಾಖಂಡದವರೆಗೆ, ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿದ ಆರೋಪಿಗೆ ಪ್ರಧಾನಿಯ ಮೌನ ಬೆಂಬಲ ದೇಶಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ ಎಂದು ಕೂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಮೋದಿಯವರ ರಾಜಕೀಯ ಕುಟುಂಬದ ಭಾಗವಾಗಿರುವುದು ಅಪರಾಧಿಗಳಿಗೆ ‘ರಕ್ಷಣೆಯ ಖಾತರಿ’ ಆಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

https://x.com/RahulGandhi/status/1785567862155055134

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!