spot_img
Wednesday, April 1, 2026
spot_img

ಪ್ರಜ್ವಲ್‌ ರೇವಣ್ಣ ವಿದೇಶ ಪರಾರಿಗೆ ದೇವೇಗೌಡರದ್ದೇ ಪ್ಲ್ಯಾನ್‌ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಯಾದಗಿರಿ) : ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​​ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್​ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಅವರು, ವಿದೇಶಕ್ಕೆ ಹೋಗುವವರಿಗೆ ವೀಸಾ ಕೊಡುವುದು ಯಾರು ಕೇಂದ್ರದ ಬಿಜೆಪಿಯವರೇ ತಾನೇ ಎಂದರು, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್​ಗೂ ಯಾವುದೇ ಸಂಬಂಧ ಇಲ್ಲ ಎಂದರು.

ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್​ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಪ್ರಶ್ನಿಸಿದರು.

ಪೆನ್​ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್​​ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್​ಗೆ ಟಿಕೆಟ್​ ಕೊಟ್ಟರು, ಪ್ರಕರಣದ ತನಿಖೆಗೆ ಎಸ್​​ಐಟಿ ರಚನೆ ಮಾಡಲಾಗಿದೆ. ಎಸ್​ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!