spot_img
Wednesday, April 1, 2026
spot_img

ಸಿದ್ದರಾಮಯ್ಯ ಕೆಳಗಿಳಿದು ಬಿಜೆಪಿಗೆ ಅಧಿಕಾರ ನೀಡಿದರೇ 24 ಗಂಟೆಗಳಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ : ಆರ್‌. ಅಶೋಕ್‌

ಜನಪ್ರತಿನಿಧಿ (ಬೆಂಗಳೂರು) : ಪ್ರಜ್ವಲ್‌ ಪ್ರಕರಣವನ್ನು ಬಿಜೆಪಿ ಬೆಂಬಲಿಸುವುದಿಲ್ಲ. ಸಿದ್ದರಾಮಯ್ಯ ಕೆಳಗಿಳಿದು ಬಿಜೆಪಿಗೆ ಅಧಿಕಾರ ನೀಡಿದರೇ 24 ಗಂಟೆಗಳಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ರೇವಣ್ಣ ನಮ್ಮ ಸಂಸದರಲ್ಲ, ಇವರೇ ಜೋಡೆತ್ತು ಎಂದು ಬಿಂಬಿಸಿಕೊಂಡು 2019ರ ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್‌ ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು, ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು ? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ. ತಮ್ಮ ವೈಫಲ್ಯಕ್ಕೆ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕೆ ? ರಾಜ್ಯ ಸರ್ಕಾರಕ್ಕೆ ಪೊಲೀಸರ ಮೇಲೆ ಹಿಡಿತ ಇಲ್ಲ ಎಂದು ಅವರು ಗಂಭೀರ ಆರೋಪ ಮಾಡಿದರು.

ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಬಿಜೆಪಿ- ಜೆಡಿಎಸ್‌ ಮೈತ್ರಿಯಿಂದ ಮೂರು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಬಿಟ್ಟುಕೊಟ್ಟ ಕ್ಷೇತ್ರಗಳಲ್ಲಿ ಯಾರು ಸ್ಪರ್ಧಿಸಬೇಕು ಎಂದು ಬಿಜೆಪಿ ತಿರ್ಮಾನಿಸುವುದಿಲ್ಲ ಎಂದು ಬಿಜೆಪಿಯನ್ನು ಅವರು ಸಮರ್ಥಿಸಿಕೊಂಡರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!