spot_img
Friday, March 21, 2025
spot_img

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಹಾಸನ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಮೊದಲ ಪ್ರತಿಕ್ರಿಯೆ !?

ಜನಪ್ರತಿನಿಧಿ (ಬೆಂಗಳೂರು) : ಇಡೀ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಸಂಬಂಧಿದಂತೆ ಇದೇ ಮೊದಲ ಬಾರಿಗೆ ಸ್ವತಃ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದು, ವಿಚಾರಣೆಗೆ ಹಾಜರಾಗಲು ಸಮಯ ಬೇಕು ಎಂದಿದ್ದಾರೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಾದ ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣಗೆ ಈಗಾಗಲೇ ಎಸ್​ಐಟಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ಪ್ರಕರಣದ ಎ1 ಆರೋಪಿ ಎಚ್ ಡಿ ರೇವಣ್ಣ ನಾಳೆ ಅಂದರೆ ಮೇ 2ರಂದು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ನಡುವೆ ಪ್ರಕರಣದ 2ನೇ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ದಿಢೀರ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯಕ್ಷರಾಗಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ, ಎಸ್​ಐಟಿ ನೋಟಿಸ್​ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಬರೆದುಕೊಂಡಿದ್ದಾರೆ.

https://x.com/iPrajwalRevanna/status/1785618338590429395

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!