spot_img
Wednesday, April 1, 2026
spot_img

ಲೈಂಗಿಕ ದೌರ್ಜನ್ಯ ಪ್ರಕರಣ : ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್‌ ನೋಟೀಸ್‌ !

ಜನಪ್ರತಿನಿಧಿ (ಬೆಂಗಳೂರು) : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಈ ಲೋಕಸಭಾ ಚುನಾವಣೆಯ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಲುಕ್‌ ಔಟ್‌ ನೋಟೀಸ್ ಹೊರಡಿಸಿದ್ದಾರೆ.

ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್‌ ಆರೋಪಿಗಳಾಗಿದ್ದಾರೆ.

ಪ್ರಕರಣ ದಾಖಲಾಗುವ ಮುನ್ನವೇ ಪ್ರಜ್ವಲ್‌ ದೇಶದಿಂದ ಪಲಾಯನ ಮಾಡಿದ್ದಾರೆ. ವಿಚಾರಣಗೆ ನೋಟೀಸ್‌ ನೀಡಿದರೂ ಕೂಡ ಹಾಜರಾಗಿಲ್ಲ.

ಪ್ರಜ್ವಲ್‌ ವಿದೇಶದಲ್ಲಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಪ್ರಜ್ವಲ್‌ ಪತ್ತೆಗಾಗಿ ಲುಕ್‌ಔಟಗ ನೋಟೀಸ್‌ ಜಾರಿ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ.

ಲುಕ್‌ಔಟ್‌ ನೋಟೀಸ್‌ ನಂತರವೂ ಪತ್ತೆ ಆಗದೇ ಇದ್ದರೆ, ಆತನ ಪತ್ತೆಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!