Tuesday, October 8, 2024

ಪ್ರಜ್ವಲ್ ರೇವಣ್ಣ ಒಬ್ಬ ಸಾಮೂಹಿಕ ಅತ್ಯಾಚಾರಿ, ಬಹಿರಂಗ ವೇದಿಕೆಯಲ್ಲಿ ಸಾಮೂಹಿಕ ಅತ್ಯಾಚಾರಿಯ ಪರ ಪ್ರಧಾನಿ ಮತಯಾಚಿಸಿದ್ದಾರೆ : ರಾಗಾ ಆಕ್ರೋಶ

ಜನಪ್ರತಿನಿಧಿ (ಶಿವಮೊಗ್ಗ, ರಾಯಚೂರು) : ಭಾರತದ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಬಿಜೆಪಿ ನಾಯಕರು ಸ್ಪಷ್ಟವಾಗಿ ಹೇಳಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ನೀಡಿದ್ದು ಅದರ ರಕ್ಷಣೆ ಮಾಡಿಕೊಂಡು ಬಂದಿದೆ. ಸಂವಿಧಾನಕ್ಕೆ ಅಂಬೇಡ್ಕರ್ ಅವರ ಕೊಡುಗೆ ಬಹಳ ದೊಡ್ಡದು. ಸಂವಿಧಾನದಲ್ಲಿ ಭಾರತದಲ್ಲಿ ಸಮಾನತೆ ಇರಬೇಕು, ಮೀಸಲಾತಿ ಇರಬೇಕು ಎಂದು ಹೇಳಿದೆ. ಇವೆರಡನ್ನು ತೊಡೆದುಹಾಕಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದೆ.

ರಾಜ್ಯ ಚುನಾವಣಾ ಪ್ರಚಾರದ ʼಪ್ರಜಾಧ್ವನಿʼ ಸಮಾವೇಶದಲ್ಲಿರುವ ರಾಹುಲ್‌ ಗಾಂಧಿ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ಪರಿಶಿಷ್ಟರು, ಆದಿವಾಸಿಗಳು ಹಾಗೂ ಹಿಂದುಳಿದವರಿಗೆ ಸಮಾನತೆ ಕೇಳುವುದು ನಕ್ಸಲ್ ವಾದ ಎಂದು ಬಿಜೆಪಿ ಪ್ರಮುಖ ನಾಯಕರು  ಹೇಳುತ್ತಾರೆ. ಬಿಜೆಪಿ ಅಧ್ಯಕ್ಷರು ಸಂವಿಧಾನವನ್ನು ಅಪಮಾನಿದ್ದಾರೆ. ಇದೆಲ್ಲದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಸಂವಿಧಾನ ರಕ್ಷಣೆ ಮಾಡುತ್ತೇವೆ ಎಂದು ಹೇಳುತ್ತಾರೆ. ಅವರಿಗೆ ಸಂವಿಧಾನ ರಕ್ಷಣೆ ಮಾಡುವ ಇಚ್ಛಾಶಕ್ತಿ ಇದ್ದರೆ ಅವರ ಅಧ್ಯಕ್ಷರು ಸಂವಿಧಾನದ ಮೇಲೆ ಆಕ್ರಮಣ ಮಾಡುತ್ತಿರುವುದೇಕೆ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿರುದ್ಧ ಕಿಡಿ ಕಾರಿದ ರಾಗಾ, ಪ್ರಜ್ವಲ್ ರೇವಣ್ಣ 400ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡುತ್ತಾರೆ. ಇದು ಕೇವಲ ಲೈಂಗಿಕ ಹಗರಣವಲ್ಲ, ಇದು ಅತಿದೊಡ್ಡ ಅತ್ಯಾಚಾರ ಪ್ರಕರಣ. ಪ್ರಧಾನಮಂತ್ರಿಗಳು ಬಹಿರಂಗ ವೇದಿಕೆಯಲ್ಲಿ ಸಾಮೂಹಿಕ ಅತ್ಯಾಚಾರಿಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಅತ್ಯಾಚಾರಿಗೆ ಮತ ನೀಡಿದರೆ ನನಗೆ ಶಕ್ತಿ ಬರುತ್ತದೆ ಎಂದು ಮತಯಾಚಿಸಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ಅಧಿಕಾರಕ್ಕಾಗಿ ಯಾವುದಕ್ಕೂ ಹಿಂಜರಿಯುವುದಿಲ್ಲ. ಪ್ರಜ್ವಲ್ ರೇವಣ್ಣ ಒಬ್ಬ ಸಾಮೂಹಿಕ ಅತ್ಯಾಚಾರಿ ಎಂದು ಪ್ರಧಾನಮಂತ್ರಿಗಳಿಗೆ ಗೊತ್ತಿದ್ದರೂ ಮೈತ್ರಿ ಮಾಡಿಕೊಂಡು, ಆತನ ಪರ ಪ್ರಚಾರ ಮಾಡಿದ್ದಾರೆ. ಆ ಮೂಲಕ ದೇಶದ ಮಹಿಳೆಯರಿಗೆ ಅಪಮಾನ ಮಾಡಿದ್ದು, ಪ್ರಧಾನಿಗಳು, ಅಮಿತ್ ಶಾ ಹಾಗೂ ಬಿಜೆಪಿ ನಾಯಕರು ದೇಶದ ಮಹಿಳೆಯರ ಬಳಿ ಕೈಮುಗಿದು ಕ್ಷಮೆ ಕೋರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!