spot_img
Wednesday, April 1, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2ರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಮನಿಷ್ ಆಸ್ಪತ್ರೆಯ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ| ಪ್ರಮೀಳಾ ನಾಯಕ್ ಅವರು ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಾಡುವ ಸಮಸ್ಯೆಗಳ ಬಗ್ಗೆ ಮಾತನಾಡಿ ಆರೋಗ್ಯ ಮತ್ತು ನೈರ್ಮಲ್ಯ ಉತ್ತಮ ಆರೋಗ್ಯದ ತಳಹದಿ. ಆಧುನಿಕತೆಯ ಯಾಂತ್ರಿಕ ಬದುಕಿಗೆ ಒಗ್ಗಿಕೊಂಡಿರುವoತ ವಿದ್ಯಾರ್ಥಿಗಳು ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಪ್ರಾಮುಖ್ಯತೆಯನ್ನು ನೀಡುವುದು ಅತ್ಯಂತ ಮುಖ್ಯವಾಗಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಹಿತಮಿತವಾದ ಉತ್ತಮ ಆಹಾರ, ಶುದ್ಧ ನೀರು, ನಿಯಮಿತವಾದ ವ್ಯಾಯಾಮ, ಯೋಗ ಅವಶ್ಯಕ ಎಂದರು.

ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪ ಪ್ರಾಂಶುಪಾಲರು ಮತ್ತು ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ಶ್ರೀಮತಿ ವೀಣಾ ವಾಸುದೇವ್ ಭಟ್ ಪ್ರಾಸ್ತಾವಿಸಿ, ಡಾ| ದೀಪಾ ವಂದಿಸಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!