spot_img
Saturday, December 7, 2024
spot_img

ಮೋದಿಯವರ 10 ವರ್ಷಗಳ ಆಡಳಿತ ಕೊನೆಗೊಳ್ಳಲಿದೆ | ʼಒಂದು ರಾಷ್ಟ್ರ, ಒಂದು ಚುನಾವಣೆ’ ಆದರೇ ಪೂರ್ಣಗೊಳ್ಳಲು ಹಲವಾರು ವರ್ಷಗಳು ಬೇಕಾಗಬಹುದು : ಮೊಯ್ಲಿ ಲೇವಡಿ

ಜನಪ್ರತಿನಿಧಿ  (ಬೆಳಗಾವಿ) : ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯನ್ನು ತರುವ ಬಿಜೆಪಿಯ ಯೋಜನೆಗಳನ್ನು ಪಿತೂರಿ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆರೋಪ ಮಾಡಿದ್ದಾರೆ.

ತಮ್ಮ ಪಕ್ಷ ಒಂದು ರಾಷ್ಟ್ರ, ಒಂದು ಚುನಾವಣೆ ನಿಯಮ ಜಾರಿಗೆ ತಂದರೆ ಗರಿಷ್ಠ ಮತಗಳನ್ನು ಪಡೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ನಂಬಿದ್ದಾರೆ. ಹೀಗಾಗಿ ನಿಯಮ ಜಾರಿಗೆ ತರಲು ಅವರು ಯಶಸ್ವಿಗೊಳಿಸಲು ಪ್ರಯತ್ನಿಸುತ್ತಿದ್ದಾರೆಂದು ಹೇಳಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣಾ ಸಿದ್ಧಾಂತದ ಪ್ರಕಾರ, ಲೋಕಸಭೆ, ರಾಜ್ಯ ವಿಧಾನಸಭೆಗಳು, ಪಂಚಾಯತ್‌ಗಳು, ಸ್ಥಳೀಯ ಸಂಸ್ಥೆಗಳು ಇತ್ಯಾದಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಯೋಜನೆ ಇದೆ ಎಂದವರು ಹೇಳಿದರು.

ಲೋಕಸಭಾ ಚುನಾವಣೆಯನ್ನು ಪೂರ್ಣಗೊಳಿಸಲು ಕನಿಷ್ಠ 60 ದಿನಗಳು ಬೇಕಾಗುತ್ತವೆ, ಇನ್ನೂ ಬಿಜೆಪಿಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯಂತೆ ಚುನಾವಣೆ ನಡೆದರೆ ಅದು ಪೂರ್ಣಗೊಳ್ಳಲು ಹಲವಾರು ವರ್ಷಗಳು ಬೇಕಾಗಬಹುದು ಎಂದು ಮೊಯ್ಲಿ ಲೇವಡಿ ಮಾಡಿದ್ದಲ್ಲದೇ, ಬಿಜೆಪಿಯು ದೇಶದ ಮೇಲೆ ತನ್ನ ಹಿಡಿತವನ್ನು ಸ್ಥಾಪಿಸಲು ಈ ಪರಿಕಲ್ಪನೆಯನ್ನು ಯೋಜಿಸುತ್ತಿದೆ ಎಂದು ಅವರು ಆರೋಪಿಸಿದರು.

ಲೋಕಸಭಾ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ 400 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತದೆ ಎಂದು ಹೇಳುತ್ತಿದೆ ಆದರೆ ವಾಸ್ತವದಲ್ಲಿ 150 ರಿಂದ 200 ಕ್ಷೇತ್ರಗಳಿಗೆ ತೃಪ್ತಿಪಡಬೇಕಾಗುತ್ತದೆ. ಮೋದಿಯವರ 10 ವರ್ಷಗಳ ಆಡಳಿತ ಕೊನೆಗೊಳ್ಳಲಿದೆ ಎಂದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!