Wednesday, September 11, 2024

ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್‌, ರೇವಣ್ಣಗೆ ಸೇರಿದ ನಿವಾಸಗಳ ಮೇಲೆ ಎಸ್‌ಐಟಿ ರೇಡ್‌ | ಸಾಕ್ಷ್ಯಾಧಾರಗಳ ಸಂಗ್ರಹ

ಜನಪ್ರತಿನಿಧಿ (ಹಾಸನ) : ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಈ ಬಾರಿ ಲೋಕಸಭಾ ಚುನಾವಣೆಯ ಅದೇ ಕ್ಷೇತ್ರದ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT) ಬೆಂಗಳೂರು ಹಾಗೂ ಹಾಸನದ ಮನೆ ಹಾಗೂ ಫಾರ್ಮ್ ಹೌಸಗಳಲ್ಲಿ ದಾಳಿ ಮಾಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ ಎಂದು ಮಾಹಿತಿ ಲಭ್ಯವಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ತೀವ್ರ ಕಾರ್ಯಾಚರಣೆಗೆ ಇಳಿದಿರುವ ವಿಶೇಷ ತನಿಖಾ ತಂಡ (SIT) ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರ ಬೆಂಗಳೂರು ಹಾಗೂ ಹಾಸನ ಜಿಲ್ಲೆಯ ಮನೆಗಳು ಹಾಗೂ ಫಾರ್ಮ್ ಹೌಸ್‌ಗಳಿಗೆ ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದೆ.

ಇಂದು(ಶುಕ್ರವಾರ) ಬೆಳ್ಳಂಬೆಳಿಗ್ಗೆ ಪ್ರಜ್ವಲ್ ತೋಟದ ಮನೆಗೆ ಎಸ್ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಐದು ಜನರ ತಂಡದಿಂದ ಹಾಸನ ಪಡುವಲಹಿಪ್ಪೆಯ ತೋಟದ ಮನೆಯಲ್ಲಿ ಪರಿಶೀಲನೆ ನಡೆದಿದೆ. ಮುಂಜಾನೆ 3.30ರ ಸುಮಾರಿನಲ್ಲೇ ಬಂದು ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿಯೂ ಇದೆ.

ಇನ್ನು, ನಿನ್ನೆ(ಗುರುವಾರ) ತಡರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಮೇಲೆ ಹೀಗೆ ಒಟ್ಟು ಮೂರು ಕಡೆ SIT ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸುಮಾರು 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದ್ದು, ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಎಸ್‌ಪಿ ಸೀಮಾ ಲಾಠ್ಕರ್ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಕೃತ್ಯ ನಡೆದಿದೆ ಎನ್ನಲಾಗುತ್ತಿರುವ ಹಲವು ಸ್ಥಳಗಳಲ್ಲಿ ಎಸ್‌ಐಟಿ ತನಿಖೆ ನಡೆಸಬೇಕಿದೆ. ಹೀಗಾಗಿ ಹಾಸನದ ಆರ್‌ಸಿ ರಸ್ತೆಯ ಸಂಸದರ ನಿವಾಸ ಮತ್ತು ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆಯ ತೋಟದ ಮನೆಯನ್ನು ಎಸ್ಐಟಿ ವಶಕ್ಕೆ ಪಡೆಯುವ ಸಂಭವವೂ ಇದೆ ಎಂದು ಹೇಳಲಾಗುತ್ತಿದೆ. ತನಿಖೆಯ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!