spot_img
Wednesday, April 1, 2026
spot_img

ಲೈಂಗಿಕ ದೌರ್ಜನ್ಯ ಪ್ರಕರಣ : ಅಶ್ಲೀಲ ವೀಡಿಯೋದಲ್ಲಿ ಪತ್ತೆಯಾದ ಮಹಿಳೆ, ರೇವಣ್ಣ ಮನೆಯಿಂದ ನಾಪತ್ತೆ ! ಮೈಸೂರಿನಲ್ಲಿ ದೂರು ದಾಖಲು

ಜನಪ್ರತಿನಿಧಿ (ಮೈಸೂರು): ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಈ ಬಾರಿ ಲೋಕಸಭಾ ಚುನಾವಣೆಯ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮೈಸೂರಿನಲ್ಲಿ ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ದೂರು ಕೊಟ್ಟಿದ್ದಾರೆಂದು ತಿಳಿದುಬಂದಿದೆ.

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮತ್ತೊಂದು ಸಂಕಷ್ಟ ಎದುರಿಸುತ್ತಿರುವ ಶಾಸಕ ರೇವಣ್ಣ ವಿರುದ್ಧ, ವ್ಯಕ್ತಿಯೊಬ್ಬರು ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಮಾಜಿ ಸಚಿವ ರೇವಣ್ಣ ಅವರ ಪುತ್ರ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಎಸಗಿದ್ದಾರೆ ಎಂದು ಆರೋಪಿಸಲಾಗುತ್ತಿರುವ ಪೆನ್‌ ಡ್ರೈಗಳಲ್ಲಿ ಸೋರಿಕೆಯಾದ ಅಶ್ಲೀಲ ವಿಡಿಯೊಗಳಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾಗಿರುವ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಅಶ್ಲೀಲ ವೀಡಿಯೋದಲ್ಲಿ ತಾಯಿ ಪತ್ತೆ, ರೇವಣ್ಣ ಮನೆಯಿಂದ ನಾಪತ್ತೆ !

‘ಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ’ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ದಾಖಲಿಸಿದ್ದಾರೆ. ದೂರಿನ ಅನ್ವಯ ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ.

ಈ ನಡುವೆ, ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ರೇವಣ್ಣ ಮನೆ ಕೆಲಸದಾಕೆ ನಾಪತ್ತೆ !

ಹೆಚ್​ಡಿ ರೇವಣ್ಣ ವಿರುದ್ಧ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಅಪಹರಿಸಿದ ಆರೋಪ ಕೇಳಿಬಂದಿದೆ. ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಮನೆಯಲ್ಲಿ ಮಹಿಳೆ ಸುಮಾರು 6 ವರ್ಷ ಕೆಲಸ‌ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ಸತೀಶ್ ಎಂಬುವವರು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಭವಾನಿ ರೇವಣ್ಣ ಅವರು ಕರೆಯುತ್ತಿದ್ದಾರೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!