spot_img
Friday, January 17, 2025
spot_img

ದೇಶಕ್ಕೆ ಮೋದಿ ಮತ್ತು ಬಿಜೆಪಿ ಇಂದಿನ ಅನಿವಾರ್ಯ- ಕೋಟ ಶ್ರೀನಿವಾಸ ಪೂಜಾರಿ

ಗಂಗೊಳ್ಳಿ : ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷದಲ್ಲಿ ದೇಶದಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆಗಳನ್ನು ತಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಮತ್ತು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಪ್ರತಿ ಮನೆಗೂ ತಲುಪಿಸಬೇಕು. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಈ ದೇಶದ ಪ್ರಧಾನಿಯನ್ನಾಗಿಸಲು ನಾವೆಲ್ಲರೂ ಈ ಬಾರಿ ಒಗ್ಗಟ್ಟಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕು. ಮನೆ ಮನೆ ಪ್ರಚಾರದ ಸಂದರ್ಭದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬಿಜೆಪಿ ಸಾಧನೆಯನ್ನು ಮತದಾರರಿಗೆ ಮನವರಿಕೆ ಮಾಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ಗಂಗೊಳ್ಳಿಯ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗ ದೇವಸ್ಥಾನದ ಬಳಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯನ್ನುದ್ದೇಶಿಸಿ ಮಂಗಳವಾರ ಅವರು ಮಾತನಾಡಿದರು.

ದೇಶಕ್ಕೆ ಮೋದಿ ಮತ್ತು ಬಿಜೆಪಿ ಇಂದಿನ ಅನಿವಾರ್ಯ. ನಮ್ಮ ಮುಂದಿನ ಪೀಳಿಗೆ ಸುರಕ್ಷಿತ ಮತ್ತು ಸಮೃದ್ಧವಾಗಿ ಇರಬೇಕಾದರೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು. ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಿಂದ ವಿಶ್ವದಲ್ಲಿ ಭಾರತ ಬಲಿಷ್ಟ ರಾಷ್ಟ್ರವಾಗಿ ಮೂಡಿ ಬರುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿ‌ಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ  ಭಕ್ತ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಲು ಮತದಾರರು ಸಹಕರಿಸಬೇಕು. ದೇಶದ ಮುಂದಿನ ಜನಾಂಗ ನೆಮ್ಮದಿಯಿಂದ ಬದುಕಲು ಬಿಜೆಪಿಗೆ ಮತ ನೀಡಿ ಎಂದು ಅವರು ಹೇಳಿದರು.

ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಮಾತನಾಡಿ, ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಎಲ್ಲರೂ ಒಟ್ಟಾಗಿ ಬಿಜೆಪಿಯನ್ನು ಅತ್ಯಂತ ದೊಡ್ಡ ಅಂತರದಲ್ಲಿ ಗೆಲ್ಲಿಸುವಂತೆ ಹಾಗೂ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಗ್ರಾಮ ಜಟ್ಟಿಗ ಸೇವಾ ಸಮಿತಿ ಅಧ್ಯಕ್ಷ ರಾಮಪ್ಪ ಖಾರ್ವಿ, ಗಂಗೊಳ್ಳಿ ಗ್ರಾಪಂ ಸದಸ್ಯರಾದ ಪ್ರಶಾಂತ ಖಾರ್ವಿ, ಲಕ್ಷ್ಮೀಕಾಂತ ಮಡಿವಾಳ, ಬಿಜೆಪಿ ಮುಖಂಡರಾದ ಮಹೇಂದ್ರ ಪೂಜಾರಿ, ವಿನೋದ ಭಂಡಾರಿ, ಶೋಭಾ ಜಿ.ಪುತ್ರನ್, ರವೀಂದ್ರ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!