spot_img
Thursday, December 5, 2024
spot_img

ಉಡುಪಿ ಸಂತೆಕಟ್ಟೆ ವಾಹನ ದಟ್ಟಣೆ: ಶೀಘ್ರ ವ್ಯವಸ್ಥಿತವಾಗಿ ಸರಿಪಡಿಸುವಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ಕೋಟ ಸೂಚನೆ

ಉಡುಪಿ, ಮೇ 4: ಸಂತೆಕಟ್ಟೆ ವಾಹನ ದಟ್ಟಣೆಯನ್ನು ಶೀಘ್ರ ವ್ಯವಸ್ಥಿತವಾಗಿ ಸರಿಪಡಿಸುವಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಸಮೀಪದ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿ ವಾಹನ ಸಂಚಾರಕ್ಕೆ ಅಡೆತಡೆಯಾದ ಬಗ್ಗೆ ನೂರಾರು ಸಂಖ್ಯೆಯ ಸಾರ್ವಜನಿಕರು ತಮಗೆ ತೊಂದರೆಯಾಗುತ್ತಿರುವ ಬಗ್ಗೆ ಮನವಿಯನ್ನು ಮಾಡುತಿದ್ದು, ಸಂಚಾರ ವ್ಯತಯದಿಂದ ತುರ್ತು ಚಿಕಿತ್ಸೆಗೆ ಕರೆದೊಯ್ಯುವ ಅಂಬುಲೆನ್ಸ್ ಸಹಿತ ಇತರ ವಾಹನಗಳು ರಸ್ತೆಯಲ್ಲಿ ತಾಸುಗಟ್ಟಲೆ ನಿಲ್ಲುವ ಸಂದರ್ಭ ಒದಗಿ ಬಂದಿದೆ. ಸಾರ್ವಜನಿಕರ ಮನವಿಯಂತೆ ಮತ್ತು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಗುವ ತೊಂದರೆಯನ್ನು ತಪ್ಪಿಸಲು ಅಂಡರ್‌ಪಾಸ್ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಮುಖ್ಯಸ್ಥರಿಗೆ ಹಾಗೂ ಅಭಿಯಂತರರಿಗೆ ಸೂಕ್ತ ಮಾರ್ಗದರ್ಶನ ನೀಡುವುದು ಮತ್ತು ಕಾಮಗಾರಿ ಮುಗಿಯುವ ತನಕ ವಾಹನ ದಟ್ಟಣೆ ಸರಿ ಪಡಿಸಲು ಸೂಕ್ತ ಬದಲಿ ವ್ಯವಸ್ಥೆ ಮಾಡಬೇಕೆಂದು ಮೇ 4ರಂದು ಉಡುಪಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!