Saturday, May 18, 2024

ಜಿಲ್ಲೆಯಲ್ಲಿ ಸಿಎನ್‌ಜಿ ಕೊರತೆ : ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಸಂಪನ್ಮೂಲ ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ

ಜನಪ್ರತಿನಿಧಿ (ಉಡುಪಿ) : ಉಡುಪಿ, ಕುಂದಾಪುರ, ಬೈಂದೂರು ಮುಂತಾದ ಪ್ರದೇಶಗಳಲ್ಲಿ ಸಿಎನ್‌ಜಿ (Compressed Natural Gas ) ಕೊರತೆಯ ಕಾರಣಗಳಿಂದಾಗಿ ಬಂಕ್ ಗಳ ಮುಂದೆ ಸಾಲು ಸಾಲು ವಾಹನಗಳು ಕಾದು ನಿಲ್ಲುವುದು ಚಾಲಕರು ಮತ್ತು ಮಾಲಕರಿಗೆ ಸಂಕಷ್ಟಕ್ಕೆ ಎದುರಾಗಿದೆ.

ಈ ಸಮಸ್ಯೆಯನ್ನು ಗಮನಕ್ಕೆ ಪಡೆದುಕೊಂಡು ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಸಂಪನ್ಮೂಲ ಸಚಿವ ಹಾರ್ದಿಕ್ ಸಿಂಗ್ ಪುರಿ ಅವರಿಗೆ ಪತ್ರ ಮೂಲಕ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕೋಟ ಅವರು ಪತ್ರವನ್ನು ಈಮೇಲ್‌(ಮಿಂಚಂಚೆ) ಮೂಲಕ ವಿನಂತಿ ಮಾಡಿಕೊಂಡಿದ್ದಾರೆ. ಕೋಟ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ಸಮಸ್ಯೆ ಸಂಬಂಧ ಹೆಚ್ಚುವರಿ ಸಿಎನ್‌ಜಿ ಪೂರೈಸಲು ಒಪ್ಪಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಸರಬರಾಜಿನ ಜವಾಬ್ದಾರಿ ಅದಾನಿ ಸಂಸ್ಥೆಯದಾಗಿದ್ದು, ತಾಂತ್ರಿಕ ತೊಂದರೆಯಿಂದ ಹಾಗೂ ಹೆಚ್ಚುವರಿ ಬೇಡಿಕೆಯಿಂದಾಗಿ ಒಂದಷ್ಟು ಸಮಸ್ಯೆ ಆಗಿದೆ ಎಂದು ಸಂಸ್ಥೆ ಒಪ್ಪಿಕೊಂಡಿದೆ.

ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ವಿಪಕ್ಷ ನಾಯಕರಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಅಗತ್ಯ ಬೇಡಿಕೆ ಪರಿಶೀಲಿಸಿ ಪ್ರಸ್ತಾಪನೆ ಸಲ್ಲಿಸಲು ಉಡುಪಿ ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಉಡುಪಿ ಜಿಲ್ಲೆಗೆ ಅದಾನಿ ಸಂಸ್ಥೆಯ ಮೂಲಕ ಸಿಎನ್‌ಜಿ ಬಂಕ್ ನಿರ್ಮಿಸಲು ಈ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!