spot_img
Saturday, March 7, 2026
spot_img

ಅಪಹರಣ ಪ್ರಕರಣ : ರೇವಣ್ಣ ಪಿಎ ತೋಟದ ಮನೆಯಲ್ಲಿ ಮಹಿಳೆ ಪತ್ತೆ !

ಜನಪ್ರತಿನಿಧಿ (ಹುಣಸೂರು) : ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಮನೆಯಿಂದ ಅಪಹರಣಕ್ಕೀಡಾಗಿದ್ದ ಮನೆ ಕೆಲಸದಾಕೆಯನ್ನು SIT ಅಧಿಕಾರಿಗಳು ಇಂದು(ಶನಿವಾರ) ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಏಪ್ರಿಲ್ 29ರಂದು ರೇವಣ್ಣ ಅವರ ಸಂಬಂಧಿ ಸತೀಶ್ ಬಾಬು ಎನ್ನುವವರು ಸಂತ್ರಸ್ತ ಮಹಿಳೆಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದರು. ಈ ಸಂಬಂಧ ತನಿಖೆ ತೀವ್ರಗೊಳಿಸಿದ್ದ ಎಸ್ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ ಎಂದು ಮಾಹಿತಿ ಒದಗಿಬಂದಿದೆ.

ರೇವಣ್ಣರ ಪಿಎ ರಾಜಶೇಖರ ಎನ್ನುವವರ ತೋಟದ ಮನೆಯಲ್ಲಿದ್ದ ಮಹಿಳೆಯನ್ನು ರಕ್ಷಿಸಿರುವ ಎಸ್ಐಟಿ ಅಧಿಕಾರಿಗಳು ಆಕೆಯನ್ನು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ.

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್ ಡಿ ರೇವಣ್ಣ 1ನೇ ಆರೋಪಿಯಾಗಿದ್ದಾರೆ. ಇನ್ನು 2ನೇ ಆರೋಪಿಯಾಗಿರುವ ಸತೀಶ್ ಬಾಬುಗೆ ಕೆ.ಆರ್ ನಗರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ ಎಂದು ತಿಳಿದು ಬಂದಿದೆ.

ಇನ್ನು, ನಿನ್ನೆ(ಶುಕ್ರವಾರ) ನನ್ನ ತಾಯಿಯನ್ನ ಅಪಹರಿಸಲಾಗಿದೆ ಎಂದು ಆರೋಪಿಸಿ ಶಾಸಕ ಹೆಚ್ ಡಿ ರೇವಣ್ಣ ಮತ್ತು ಸುರೇಶ್ ಬಾಬು ಎಂಬುವವರ ವಿರುದ್ದ ಸಂತ್ರಸ್ತ ಮಹಿಳೆಯ ಪುತ್ರ ಮೈಸೂರಿನ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!