spot_img
Saturday, June 21, 2025
spot_img

ದೇಶ, ಧರ್ಮದ ಉಳಿವಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು- ಅರುಣ್ ಕುಮಾರ್ ಪುತ್ತಿಲ

ಸಿದ್ದಾಪುರ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ, ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದತಿ, ಸಿ‌ಎ‌ಎ ಜಾರಿ ಮಾಡಿದ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಋಣ ತೀರಿಸಬೇಕು. ದೇಶ, ಧರ್ಮದ ಉಳಿವಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು ಎಂದು ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕರೆ ನೀಡಿದರು.

ಶನಿವಾರ ಸಿದ್ದಾಪುರದಲ್ಲಿ ನಡೆದ ಬಿಜೆಪಿ ರೋಡ್ ಶೋ ನಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ಇನ್ನಷ್ಟು ಶಕ್ತಿ ನೀಡಲು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು. ರಾಜ್ಯದಲ್ಲಿ ಮಹಿಳೆಯ ಹತ್ಯೆ, ಮಹಿಳೆಯರ ಮೇಲಿನ ಅತ್ಯಾಚಾರ ಹೆಚ್ಚಾಗುತ್ತಿದೆ. ಗೋ ಹತ್ಯೆಯಾಗುತ್ತಿದೆ. ಹೀಗಾಗಿ ಬಿಜೆಪಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆಕೊಟ್ಟರು.

ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮಾತನಾಡಿ, ಇದು ದೇಶ ಕಟ್ಟುವ ಚುನಾವಣೆ, ದೇಶ ಸುರಕ್ಷಿತವಾಗಿದ್ದರೆ ನಾವು ಸುರಕ್ಷಿತವಾಗಿ ಬದಕಲು ಸಾಧ್ಯ. ದೇಶದ ಸುರಕ್ಷತೆ ಪ್ರಧಾನಿ ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ. ಭಾರತದ ೨೬,೫೮೫ ವಿದ್ಯಾರ್ಥಿಗಳ ರಕ್ಷಣೆಗಾಗಿ ಉಕ್ರೇನ್- ರಷ್ಯ ಯುದ್ಧವನ್ನು ೮ ಗಂಟೆ ನಿಲ್ಲಿಸಿ, ಎಲ್ಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆದುಕೊಂಡು ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಒಂದು ಫೋನ್ ಕಾಲ್ ನಿಂದ ಇದೆಲ್ಲ ಸಾಧ್ಯವಾಗಿದೆ. ಮೋದಿಯವರ ಸಾಮರ್ಥ್ಯವನ್ನು ದಕ್ಷಿಣ ಆಫ್ರಿಕಾ, ಅರಬ್ ದೇಶ ನಾಯಕರು ಮೆಚ್ಚಿದ್ದಾರೆ. ಆದರೆ ನಮ್ಮ ದೇಶದ ಕಾಂಗ್ರೆಸ್ ನಾಯಕರಿಗೆ ಇದು ಅರ್ಥ ಆಗುತ್ತಿಲ್ಲ ಎಂದರು.

ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬಿಜೆಪಿ ಅಧಿಕಾರದಲ್ಲಿದ್ದಾಗ ನಾರಾಯಣಗುರು ನಿಗಮ ಮಾಡಿದ್ದೇವು. ಮೀನುಗಾರರಿಗೆ, ಹಿಂದುಳಿದ ವರ್ಗಕ್ಕೆ ಸೌಲಭ್ಯ ಕಲ್ಪಿಸಿದ್ದು ಬಿಜೆಪಿ. ಆದರೆ ಅಧಿಕಾರಕ್ಕೆ ಬರುವ ಮೊದಲು ಸಿದ್ದರಾಮಯ್ಯ ಅವರು ತಿಂಗಳಿಗೆ ೧೦ಕೆ.ಜಿ. ಅಕ್ಕಿ ನೀಡುತ್ತೇನೆ ಎಂದಿದ್ದರು. ಅಧಿಕಾರಕ್ಕೆ ಬಂದ ನಂತರ ಒಂದು ಕಾಳು ಅಕ್ಕಿಯನ್ನು ನೀಡಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ತಿಂಗಳು ಕರ್ನಾಟಕದ ಬಡವರಿಗೆ ಹಂಚರು ೨೫ ಲಕ್ಷ ಕ್ವಿಂಟಾಲ್ ಅಕ್ಕಿ ನೀಡುತ್ತಿದೆ ಎಂದರು.

ಕಳೆದ ಹತ್ತು ವರ್ಷದಲ್ಲಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಹಲವಾರು ರೀತಿಯಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದೆ. ಡಾ. ಅಂಬೇಡ್ಕರ್ ಅವರಿಗೆ ಮೋದಿ ಸರ್ಕಾರ ಸೂಕ್ತ ಗೌರವ ನೀಡಿದೆ. ಕಾಂಗ್ರೆಸ್ ಅಂಬೇಡ್ಕರ್ ಅವರಿಗೆ ಮೋಸ ಮಾಡಿದ್ದು ಮಾತ್ರವಲ್ಲ, ಅವರನ್ನು ರಾಜಕೀಯವಾಗಿ ಸೋಲಿಸಿದೆ. ಬಿಜೆಪಿ ಎಂದೂ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿಲ್ಲ, ಮಾಡುವುದೂ ಇಲ್ಲ. ಸಂವಿಧಾನಕ್ಕೆ ಇನ್ನಷ್ಟು ಗೌರವ ತಂದುಕೊಟ್ಟಿರುವುದೇ ಬಿಜೆಪಿ ಎಂದು ಹೇಳಿದರು.

ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ, ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ರೋಹಿತ್ ಶೆಟ್ಟಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಥ್ವಿರಾಜ್ ಬಿಲ್ಲಾಡಿ, ಪ್ರಮುಖರಾದ ರಾಜೇಶ್ ಕಾವೇರಿ, ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!