Sunday, May 19, 2024

ಪ್ರಜ್ವಲ್‌, ರೇವಣ್ಣ ಪ್ರಕರಣಗಳಲ್ಲಿ ದೇವೇಗೌಡ ಹಾಗೂ ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ತಡೆ !

ಜನಪ್ರತಿನಿಧಿ (ಬೆಂಗಳೂರು) : ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರದ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರುಗಳನ್ನು ಬಳಸಬಾರದೆಂದು ನ್ಯಾಯಾಲಯ ಸೂಚಿಸಿದೆ.

ಹಾಸನನಲ್ಲಿ ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ಪುಂಖಾನುಪುಂಖವಾಗಿ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಲೈಂಗಿಕ ದೌರ್ಜನ್ಯದಿಂದ ನೊಂದಿರುವ ಸಂತ್ರಸ್ತರೊಬ್ಬರು ಪ್ರಜ್ವಲ್ ರೇವಣ್ಣ ಮತ್ತು ಎಚ್ ಡಿ ರೇವಣ್ಣ ವಿರುದ್ದ ದೂರು ದಾಖಲಿಸಿದ್ದಾರೆ.

ಈ ಬಳಿಕ, ರೇವಣ್ಣ ವಿರುದ್ಧ ಸಂತ್ರಸ್ಥ ಮಹಿಳೆಯೊಬ್ಬರ ಅಪಹರಣದ ಕೇಸ್ ಕೂಡ ದಾಖಲಾಗಿದೆ. ಮತ್ತೊಂದೆಡೆ, ಈ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಎಸ್ಐಟಿಯಿಂದ ಸಂತ್ರಸ್ಥೆಯರಿಂದ ಹೇಳಿಕೆಗಳನ್ನು ಪಡೆಯಲಾಗುತ್ತಿದೆ ಎಂಬ ಮಾಹಿತಿಯೂ ಇದೆ.

ಈ ಎಲ್ಲಾ ಪ್ರಕರಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಬಿತ್ತರವಾಗುವ ಬಹುತೇಕ ಎಲ್ಲಾ ಸುದ್ದಿಗಳಲ್ಲಿ ಅಥವಾ ವರದಿಗಳಲ್ಲಿ ಅನೇಕ ಕಡೆ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಎಂತಲೂ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪುತ್ರ ಎಚ್ ಡಿ ರೇವಣ್ಣ ಎಂತಲೂ ಬಳಕೆಯಾಗಿದೆ. ಪ್ರಜ್ವಲ್ ಪ್ರಕರಣದಲ್ಲಿ ದೇವೇಗೌಡರ ಮೊಮ್ಮಗ ಎಂದೇ ಹಲವಾರು ಕಡೆ ಪ್ರಕಟಿಸಲಾಗಿದೆ. ವಿಶೇಷವಾಗಿ ಉತ್ತರ ಭಾರತದ ಮಾಧ್ಯಮಗಳಲ್ಲಿ ಹಾಗೂ ವಿದೇಶಿ ಮಾಧ್ಯಮಗಳಲ್ಲಿ ದೇವೇಗೌಡರ ಹೆಸರನ್ನು ಬಳಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳಿಂದ ಮಾನಸಿಕವಾಗಿ ನೊಂದಿರುವ ದೇವೇಗೌಡರ ಕುಟುಂಬ, ನ್ಯಾಯಾಲಯದ ಮೊರೆ ಹೋಗಿ ತಮ್ಮ ಹೆಸರುಗಳನ್ನು ಬಳಸದಂತೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿತ್ತು. ಆ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಥಳೀಯ ನ್ಯಾಯಾಲಯ ಈ ಕುರಿತಂತೆ ನಿರ್ದೇಶನ ನೀಡಿದೆ.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!