Wednesday, September 11, 2024

ಕೇಳಿದಷ್ಟು ಬರದ ಬರ ಪರಿಹಾರ : ಜುಲೈನಲ್ಲಿ ಜುಲೈನಲ್ಲಿ ರಾಜ್ಯದ ಅರ್ಜಿ ವಿಚಾರಣೆ ಮಾಡಲಿರುವ ಸುಪ್ರೀಂ ಕೋರ್ಟ್‌ !

ಜನಪ್ರತಿನಿಧಿ (ನವ ದೆಹಲಿ) :  ಕೇಂದ್ರ ಸರ್ಕಾರಕ್ಕೆ ಬರ ನಿರ್ವಹಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ ಡಿಆರ್ ಎಫ್) ನಿಂದ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜುಲೈನಲ್ಲಿ ಮಾಡಲಾಗುವುದು ಸುಪ್ರೀಂಕೋರ್ಟ್ ಇಂದು(ಸೋಮವಾರ) ತಿಳಿಸಿದೆ.

ಕರ್ನಾಟಕ ಸರ್ಕಾರಕ್ಕೆ ಬರ ನಿರ್ವಹಣೆಗಾಗಿ ಸುಮಾರು 3,400 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ಗೆ ಹೇಳಿತ್ತು.

ಇಂದು(ಸೋಮವಾರ) ಈ ವಿಚಾರ ಕೈಗೆತ್ತಿಕೊಂಡ ನ್ಯಾಯಾಧೀಶರಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಈ ವಿಚಾರದಲ್ಲಿ ಸರ್ಕಾರ ಅಫಿಡವಿಟ್ ಸಲ್ಲಿಸಲಿದೆ ಎಂದು ಹೇಳಿದರು.

ಸದ್ಯ ವಿಚಾರಣೆಯನ್ನು ನ್ಯಾಯಪೀಠ ಜುಲೈಗೆ ಮುಂದೂಡಿದೆ. ಕರ್ನಾಟಕಕ್ಕೆ 3,450 ಕೋಟಿ ರೂಪಾಯಿಗಳನ್ನು ಕಳೆದ ವಾರ ನಡೆದ ವಿಚಾರಣೆ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿತ್ತು.  ಆದರೆ, ರಾಜ್ಯ ಸರ್ಕಾರ ರೂ. 18,000 ಕೋಟಿ ರೂ. ಬಿಡುಗಡೆಗೆ ಮನವಿ ಮಾಡಿರುವುದಾಗಿ ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹೇಳಿದರು.

ಎನ್‌ಡಿಆರ್‌ಎಫ್ ಪ್ರಕಾರ, ಬರ ಪರಿಹಾರಕ್ಕೆ ಹಣಕಾಸು ನೆರವು ಬಿಡುಗಡೆ ಮಾಡದಿರುವ ಕೇಂದ್ರದ ಕ್ರಮವು ಸಂವಿಧಾನದ 14 ಮತ್ತು 21 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಿದ ರಾಜ್ಯದ ಜನರ ಮೂಲಭೂತ ಹಕ್ಕುಗಳ “ಪೂರ್ವಭಾವಿ ಉಲ್ಲಂಘನೆ” ಎಂದು ಘೋಷಿಸಲು ಅರ್ಜಿಯಲ್ಲಿ ಕೋರಲಾಗಿದೆ.

ರಾಜ್ಯ ತೀವ್ರ ಬರದಲ್ಲಿ ತತ್ತರಿಸುತ್ತಿದ್ದು, ಜನರ ಜೀವನ ಮತ್ತು 2023ರ ಮುಂಗಾರಿನ ಮೇಲೆ ಪರಿಣಾಮ ಬೀರಿದೆ. ಜೂನ್ ನಲ್ಲಿ ಆರಂಭವಾಗುವ ಮುಂಗಾರು, ಸೆಪ್ಟೆಂಬರ್ ನಲ್ಲಿ ಕೊನೆಯಾಗಿದ್ದು, ಒಟ್ಟಾರೇ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. 196 ತಾಲ್ಲೂಕುಗಳನ್ನು ತೀವ್ರ ಪೀಡಿತ ಮತ್ತು ಉಳಿದ 27 ಮಧ್ಯಮ ಪೀಡಿತ ಎಂದು ವರ್ಗೀಕರಿಸಲಾಗಿದೆ ಎಂದು ಅರ್ಜಿಯ ಮೂಲಕ ಹೇಳಲಾಗಿದೆ.

2023ರ ಮುಂಗಾರು ಹಂಗಾಮಿಗೆ ಒಟ್ಟಾರೆಯಾಗಿ 48 ಲಕ್ಷ ಹೆಕ್ಟೇರ್‌ನಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟವಾಗಿದ್ದು, ಅಂದಾಜು 35,162 ಕೋಟಿ ರೂಪಾಯಿ ನಷ್ಟ (ಕೃಷಿ ವೆಚ್ಚ) ಆಗಿದೆ ಎಂದು ವಕೀಲ ಡಿ ಎಲ್ ಚಿದಾನಂದ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ. ಎನ್‌ಡಿಆರ್‌ಎಫ್ ಯಡಿ ಕೇಂದ್ರದಿಂದ ರೂ. 18,171.44 ಕೋಟಿ ನೆರವು ಕೋರಲಾಗಿದೆ ಎಂದು ಅದು ಹೇಳಿದೆ.

ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ 2020 ರಲ್ಲಿ ಪರಶೀಲಿಸಿದ ಬರ ನಿರ್ವಹಣೆಯ ಕೈಪಿಡಿಯಡಿ ಕರ್ನಾಟಕಕ್ಕೆ ಬರ ನಿರ್ವಹಣೆಗೆ ಹಣಕಾಸಿನ ನೆರವು ನಿರಾಕರಿಸುವ ಕೇಂದ್ರದ “ನಿರಂಕುಶ ಕ್ರಮಗಳ” ವಿರುದ್ಧ ರಾಜ್ಯವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದೆ.

ಮಾತ್ರವಲ್ಲದೆ, ಕೇಂದ್ರ ಸರ್ಕಾರದ ಆಕ್ಷೇಪಾರ್ಹ ಕ್ರಮವು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಶಾಸನಬದ್ಧ ಯೋಜನೆ, ಬರ ನಿರ್ವಹಣೆಯ ಕೈಪಿಡಿ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯ ಸಂವಿಧಾನ ಮತ್ತು ಆಡಳಿತದ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!