spot_img
Tuesday, February 18, 2025
spot_img

ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ : NTA ಸ್ಪಷ್ಟನೆ

ಜನಪ್ರತಿನಿಧಿ (ನವ ದೆಹಲಿ) : ನಿನ್ನೆ (ಭಾನುವಾರ) ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್‌ – 2024) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ (NTA) ಸ್ಪಷ್ಟನೆ ನೀಡಿದೆ.

ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಪಶ್ನೆ ಪತ್ರಿಕೆಯ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗಿವೆ ಎಂಬ ವದಂತಿಗಳೂ ಕೂಡ ಇದ್ದವು.

ಈ ಸಂಬಂಧ ಸ್ಪಷ್ಟನೆ ನೀಡಿದ NTA, ನೀಟ್‌-2024 ಪ್ರಶ್ನೆ ಪತ್ರಿಕೆಗೂ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪ್ರಶ್ನೆ ಪತ್ರಿಕೆಗೂ ಯಾವುದೇ ಸಂಬಂಧವಿಲ್ಲ. ಸುಖಾಸುಮ್ಮನೆ ಆರೋಪಗಳನ್ನು ಮಾಡಬಾರದು. ಆರೋಪಗಳು ದಾಖಲೆಪೂರ್ಣವಾಗಿರಬೇಕು. ಆಧಾರ ರಹಿತ ಆರೋಪಗಳನ್ನು ಮಾಡುವುದು ಸರಿಯಲ್ಲ. ನೀಟ್‌ ಪರೀಕ್ಷೆ ವ್ಯವಸ್ಥಿತವಾಗಿ ನಡೆದಿದೆ. ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದಕ್ಕೆ ಸಾಧ್ಯವೇ ಇಲ್ಲ ಎಂದು ತಿಳಿಸಿದೆ.

ಈ ಬಗ್ಗೆ ಪಿಟಿಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ ಎನ್‌ಟಿಎ ಹಿರಿಯ ನಿರ್ದೇಶಕಿ ಸಾಧನಾ ಪರಿಚಾರ್‌, ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಮಾಡುವುದಕ್ಕೆ ಯಾರಿಗೂ ಅನುಮತಿಯಿಲ್ಲ. ಪರೀಕ್ಷಾ ಕೇಂದ್ರಗಳು ಸಿಸಿ ಟಿವಿ ಕಣ್ಗಾವಲಿನಿಂದ ಕೂಡಿವೆ. ಪಾರದರ್ಶಕವಾಗಿ ಪರೀಕ್ಷೆಗಳು ನಡೆದಿವೆ ಎಂದು ತಿಳಿಸಿದ್ದಾರೆ.

ದೇಶದ 571 ನಗರಗಳ ಹಾಗೂ ಹೊರದೇಶದ  14 ನಗರಗಳ ಒಟ್ಟು 4,750 ಪರೀಕ್ಷಾ ಕೇಂದ್ರಗಳಲ್ಲಿ ನೀಟ್‌ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದೂ ಕೂಡ ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!